NEWS

ಏಪ್ರಿಲ್ 08 ರಂದು ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕಾರ

ಪಾಲನೆ ನ್ಯೂಸ್

ಮಂಡ್ಯ : ಏಪ್ರಿಲ್ 08 ರಂದು ಜಿಲ್ಲಾ ತಾಲ್ಲೂಕು ಕಚೇರಿ ಆವರಣದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ಗಂಟೆವರೆಗೆ ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲಾ ಹಾಗೂ ತಾಲ್ಲೂಕಿನಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು/ ಅಹವಾಲು ಸ್ವೀಕಾರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕಾರ ಮಾಡಲಿದ್ದಾರೆ.

ಸುನೀಲ್ ಕುಮಾರ್.ಹೆಚ್.ಟಿ, ಡಿವೈಎಸ್‌ಪಿ ಹಾಗೂ ಬ್ಯಾಟರಾಯಗೌಡ.ಬಿ.ಪಿ. ರವಿಕುಮಾರ್.ಎಂ. ಲೇಪಾಕ್ಷ ಮೂರ್ತಿ.ಆರ್.ಜಿ ಪೊಲೀಸ್‌ ಇನ್ಸ್ಪೆಕ್ಟರ್, ಕರ್ನಾಟಕ ಲೋಕಾಯುಕ್ತರು ಸದರಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸದರಿ ಸಭೆಯಲ್ಲಿ ಸರ್ಕಾರಿ ಮತ್ತು ಅರೆಸರ್ಕಾರಿ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರುಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು/ಅಹವಾಲುಗಳೇನಾದರೂ ಇದ್ದಲ್ಲಿ ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿರ್ಬಂಧಕ್ಕೆ ಚಿಂತನೆ

ಪ್ರತಿ ಸೋಮವಾರ ತಹಸೀಲ್ದಾರ್, ಇಓ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರ ಕುಡಿಯುವ ನೀರಿನ ಸಮನ್ವಯ ಸಮಿತಿ ಸಭೆ ನಡೆಸಲು ಜಿ.ಪಂ. ಸಿಇಓ ಸೂಚನೆ

ನಿಖಿಲ್‌ಗೆ ರಾಜಕೀಯ ಯಶಸ್ಸು ಸಿಗಲಿ: ಬಿ.ಆರ್.ರಾಮಚಂದ್ರ

Leave a Comment