NEWS

‘ಬಾಸ್’ ಸಿನಿಮಾ ಮರು ಬಿಡುಗಡೆಗೆ ತಡೆಯಾಜ್ಞೆ

ಪಾಲನೆ ನ್ಯೂಸ್

ಬೆಂಗಳೂರು : ನಟ ದರ್ಶನ್ ಆರೋಪಿಯಾಗಿರುವ ಚಿತ್ರದು ರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧಾ ರಿತ ಎನ್ನಲಾದ ಕನ್ನಡದ ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ. ಬಾಸ್ ಚಿತ್ರ ಬಿಡುಗಡೆ ಮಾಡದಂತೆ ಚಿತ್ರದ ನಿರ್ಮಾಪ ಕರು, ನಿರ್ದೇಶಕರು, ವಿತರಕರು ಮತ್ತು ಪ್ರದರ್ಶಕರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ದರ್ಶನ್ ಸಲ್ಲಿಸಿದ್ದ ಮೂಲ ದಾವೆ ವಿಚಾರಣೆ ನಡೆಸಿದ ನಗರದ 16ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ.

ನಗರದ ಸೆಷನ್ಸ್‌ ನ್ಯಾಯಾಲಯದಲ್ಲಿ ವಿಚಾರಣಾ ಹಂತ ದಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಧರಿಸಿದ ಅಥವಾ ದಾವೆದಾರರ ಜೀವನ ಉಲ್ಲೇಖಿಸುವಂತಹ ಅಥವಾ ಅವರ ಜೀವನಕ್ಕೆ ಸಂಬಂಧಿಸಿದ, ಅವರ ಕುಟುಂಬ ಮತ್ತು ಗೌರವಕ್ಕೆ ತೇಜೋವಧೆ ಉಂಟು ಮಾಡುವಂತಹ ವಿವಾದಿತ ಚಿತ್ರವನ್ನು (ಬಾಸ್) ಚಿತ್ರಮಂದಿರ ಅಥವಾ ಒಟಿಟಿ ಮೂಲಕ ಬಿಡುಗಡೆ ಮಾಡಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ನಂತರ ಬಾಸ್ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರಿಗೆ ಸಮನ್ ಜಾರಿಗೊಳಿಸಿ ದಾವೆಯ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿತು.

ಏ.14ರಂದು ರಿಲೀಸ್ ಆಗಬೇಕಿದ್ದ ಚಿತ್ರ: ಬಾಸ್ ಚಿತ್ರವು 2026ರ ಏ.14 ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ದವಾಗಿತ್ತು. ಆದರೆ, ಚಿತ್ರವು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿದೆ. ಚಿತ್ರ ಬಿಡುಗಡೆಯಾದರೆ ತಮ್ಮ ಘನತೆ ಮತ್ತು ಗೌರವವಕ್ಕೆ ಧಕ್ಕೆಯಾಗಲಿದೆ. ಮೇಲಾಗಿ ಪ್ರಕರಣಕ್ಕೆ ಸಂಬಂಧಿಸಿದ ಸೆಷನ್ಸ್ ನ್ಯಾಯಾಯದಲ್ಲಿ ವಿಚಾರಣೆಗೆ ಅಡ್ಡಿ ಉಂಟಾಗಲಿದೆ. ಇದರಿಂದ ಬಾಸ್ ಚಿತ್ರವನ್ನು ಬಿಡುಗಡೆ ಮಾಡದಂತೆ ಆದೇಶಿಸಬೇಕು ಎಂದು ಕೋರಿ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ನ್ಯಾಯಾಲಯಕ್ಕೆ ದಾವೆ ಸಲ್ಲಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

An architect isn’t someone; he is visionary

ಅಕ್ಕರೆಯ ಅಂಗಳ ಬೇಸಿಗೆ ಶಿಬಿರಕ್ಕೆ ಚಾಲನೆ : ಕೆ.ಆರ್. ನಂದಿನಿ

ಸ್ವ ಸಹಾಯ ಸಂಘಗಳ ಉತ್ಪನ್ನಗಳ ಮೌಲ್ಯವರ್ಧನೆ ಮಾಡುವ ಮೂಲಕ ಮಹಿಳೆಯರು ಉದ್ಯೋಗ ಸೃಷ್ಟಿಕರ್ತರಾಗಲಿ

Leave a Comment