NEWS

ಮಹಿಳೆಯರ ಸಬಲೀಕರಣ ನಮ್ಮ ಸರ್ಕಾರ ಬದ್ಧವಾಗಿದೆ

ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷದ 30 ಸಾವಿರ ಕೋಟಿಗೂ ಹೆಚ್ಚಿನ ಅನುದಾನ ಭಾರತ ದೇಶ ಅಭಿವೃದ್ಧಿ ಹಾಗೂ ಆರ್ಥಿಕ ಸಬಲೀಕರಣ ಆಗಬೇಕಾದರೆ ಮಹಿಳೆಯರು ಶೈಕ್ಷಣಿಕವಾಗಿ ಮುಂದೆ ಬರಬೇಕು :ಎನ್ ಚಲುವರಾಯಸ್ವಾಮಿ.

ಪಾಲನೆ ನ್ಯೂಸ್

ಮಂಡ್ಯ : ನಮ್ಮ ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿದೆ. ಗ್ಯಾರಂಟಿ ಯೋಜನೆಗಳ ಮೂಲಕ 1 ಲಕ್ಷದ 30 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವಿವಿಧ ಯೋಜನೆಗಳ ರೂಪದಲ್ಲಿ ನಾಡಿನ ಜನರಿಗೆ ನೀಡಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.

ಇಂದು ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಡ್ಯ ಇವರ ಸಹಭಾಗಿತ್ವದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಷ್ಟದ ಪರಿಸ್ಥಿತಿ ಎಲ್ಲರಿಗೂ ಇರುತ್ತದೆ ಆದರೆ ಅದನ್ನು ಮನಸಲ್ಲಿ ಇಟ್ಟುಕೊಳ್ಳದೆ ಸರ್ಕಾರದಿಂದ ಸಿಗುವ ಸೌಲಭ್ಯದಿಂದಲೇ ಮುಂದೆ ಬರುವ ಪ್ರಯತ್ನ ಮಾಡಿಮಾಡಬೇಕು.ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ಇದೆ, ಸರ್ಕಾರ ಮಹಿಳೆಯರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ “ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ” ಎಂಬ ವಾಕ್ಯದಡಿ ಮಹಿಳೆಯರ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದರು.

ಶಿಕ್ಷಕರ ನೇಮಕಾತಿಯಲ್ಲಿ ಶೇ 50% ರಷ್ಟು ಮೀಸಲಾತಿ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೀಸಲಾತಿ ನೀಡಲಾಗಿದೆ ಇಷ್ಟಾದರೂ ಮಹಿಳೆಯರು ಸಮಾಜದಲ್ಲಿ ಮುಂದೆ ಬಂದಿದ್ದಾರ ಎಂದು ಹೆಣ್ಣು ಮಕ್ಕಳು ತಮ್ಮನ್ನು ತಾವೇ ಅವಲೋಕಿಸಿಕೊಳ್ಳಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಅಸೆಂಬ್ಲಿ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ದೊರೆಯುವ ಕಾಲ ದೂರ ಇಲ್ಲ, ಜಿಲ್ಲೆಯ ಅಭಿವೃದ್ಧಿ ಸಿ.ಇ.ಓ ನಂದಿನಿ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಜಿಲ್ಲೆಯಲ್ಲಿ ಉತ್ತಮ ಆಡಳಿತ ನಡೆಸಿಕೊಂಡು ಹೋಗುತ್ತಿದ್ದಾರೆ, ಐ.ಎ.ಎಸ್ ಪರೀಕ್ಷೆಯಲ್ಲಿ ಸಿ.ಇ.ಓ ನಂದಿನಿ ಅವರು ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಅವರನ್ನು ಮಹಿಳೆಯರು ಆದರ್ಶವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು.

ದೇಶದ ಅಭಿವೃದ್ಧಿಗೆ ಮತ್ತು ಆರ್ಥಿಕ ಸಬಲೀಕರಣ ಆಗಬೇಕಾದರೆ ಮಹಿಳೆಯರು ಶೈಕ್ಷಣಿಕವಾಗಿ ಮುಂದೆ ಬರಬೇಕು. ಮಹಿಳೆಯರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಪ್ರಾತಿನಿಧ್ಯ ಅತಿ ಮುಖ್ಯ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಎನ್.ಆರ್. ಎಂ.ಎಲ್. ಯೋಜನೆಯಡಿ ಸೌಲಭ್ಯ ಪಡೆದು ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆಯನ್ನು ತೆರೆಯಲಾಗುವುದು, ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬರಲಿದೆ ಎಲ್ಲರೂ ಜವಾಬ್ದಾರಿಯಿಂದ ಅರ್ಹ ವ್ಯಕ್ತಿಯನ್ನು ಆರಿಸಿ ಎಂದು ಹೇಳಿದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಅವರು ಮಾತನಾಡಿ ಮಹಿಳೆಯರು ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬ ಪರಿಕಲ್ಪನೆ ಮಹಾತ್ಮ ಗಾಂಧೀಜಿ ಅವರದ್ದು. ಮಹಿಳೆಯರ ಅಭಿವೃದ್ಧಿಗೆ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ ಅವರು ಜಿಲ್ಲೆಗೆ ಗಾರ್ಮೆಂಟ್ಸ್ ( ಸಣ್ಣ ಕೈಗಾರಿಕೆ )ತರಲು ಸಿದ್ಧರಾಗಿದ್ದಾರೆ ಅವರಿಗೆ ಬಸರಾಳಿನಲ್ಲಿ 100 ಎಕ್ಕರೆ ಜಾಗವನ್ನು ಈಗಾಗಲೇ ಗುರುತಿಸಲಾಗಿದೆ ಶ್ರೀಘ್ರದಲ್ಲಿಯೆ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಮಂಡ್ಯ ನಗರದಲ್ಲಿ ಮಹಿಳೆಯರನ್ನು ಉತ್ತೇಜಸುವ ಸಲುವಾಗಿ ಅಕ್ಕ ಸೂಪರ್ ಮಾರುಕಟ್ಟೆಯನ್ನು ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಲಿನಕ್ಷೆ ತಯಾರಿಸುತ್ತೇವೆ. ಮಹಿಳೆಯರ ಸ್ವಯಂ ಉದ್ಯೋಗ ನೀಡುವ ನಿಟ್ಟಿನಲ್ಲಿ ಉತ್ಪನ್ನ ಮಾರಾಟ ಮಾಡುವ ಮಾರುಕಟ್ಟೆಯನ್ನು ಸ್ಥಾಪಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಮಹಿಳಾ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು ಅವರ ಸಬಲೀಕರಣವಗಬೇಕು. ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8 ರಿಂದ ಏಪ್ರಿಲ್ 8 ವರೆಗೆ ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಮಹಿಳೆಯರ ಸಬಲೀಕರಣ ಆಗಿದೆ ದೇಶದ ಸಬಲೀಕರಣ ಸಾಧ್ಯವಿಲ್ಲ ಎಂದರು.

ಜಿಲ್ಲೆಯ ಮಹಿಳೆಯರಿಗೆ ಲಿಂಗತ್ವ ದೌರ್ಜನ್ಯ ತಡೆಗೆ ತರಬೇತಿ ನೀಡಲಾಗಿದೆ. ಮಹಿಳೆಯರಲ್ಲಿ ಆಹಾರ, ಆರೋಗ್ಯ ನೈರ್ಮಲ್ಯ ಕಾಪಾಡುವುದು ಅತಿ ಮುಖ್ಯ, ಮಹಿಳೆಯರಿಗೆ ಸ್ವಯಂ ರಕ್ಷಣೆ ಕಲೆ ಕುರಿತು ಮಹಿಳೆಯರಿಗೆ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ 25 ದಿನಗಳ ಕರಾಟೆ ತರಬೇತಿಯನ್ನು ನೀಡಲಾಗಿದೆ ಮುಂದೆಯೂ ಉಚಿತವಾಗಿ ತರಬೇತಿ ನೀಡಲಾಗುತ್ತದೆ. ಕೃಷಿ ಸಖಿಯರಿಗೆ ವಿಶ್ವ ಪ್ರಸಿದ್ಧ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಮೈಸೂರು ವಿಜ್ಞಾನಿಗಳಿಂದ ತರಬೇತಿ ಮತ್ತು ಅರಿವು ಮೂಡಿಸುವ ಕಾರ್ಯಾಗಾರವನ್ನು ಜಿಲ್ಲೆಯ ಮಹಿಳೆಯರಿಗೆ ನೀಡಲಾಗಿದೆ ಎಂದು ಹೇಳಿದರು.

ಪಶು ಸಖಿಯರಿಗೂ ಪಶು ಸಾಗಾಣಿಕೆ ಕುರಿತು ತರಬೇತಿ ನೀಡಲಾಗಿದೆ. ಕ್ರೀಡಾ ಇಲಾಖೆಯ ವತಿಯಿಂದ ಕ್ರಿಕೆಟ್ ಹಾಗೂ ಭತ್ತ ಕುಟ್ಟುವ ಕ್ರೀಡೆ ಹಾಗೂ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಬೆಂಕಿ ಇಲ್ಲದೆ ಅಡುಗೆ ಮಾಡುವ ಸ್ಪರ್ಧೆ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿ ಮಹಿಳೆಯರ ಸಬಲೀಕರಣ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ವಿಶೇಷ ಮಳಿಗೆಗಳ ಆಯೋಜನೆ

ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ -2026 ರ ಪ್ರಯುಕ್ತ ಡಾ. ಬಿ. ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ವಿವಿಧ ರೀತಿಯ ವೈವಿದ್ಯಮಯ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.ಮಹಿಳಾ ಸ್ವಸಹಾಯ ಗುಂಪುಗಳಿಂದ ತಯಾರಿಸಿದ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗಿತ್ತು.

ಉಚಿತ ರಕ್ತದಾನ ಶಿಬಿರ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ಅರೋಗ್ಯ ತಪಾಸಣೆ ಕೇಂದ್ರ (ಆರೋಗ್ಯ ಇಲಾಖೆ ವಸ್ತುಪ್ರದರ್ಶನ) ವನ್ನು ಸ್ಥಾಪಿಸಲಾಗಿದೆ.

ನಂತರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ, ಚಿತ್ರಕಲೆ, ಪ್ರಬಂಧ, ಅಶುಭಾಷಣಮತ್ತು ವಿವಿಧ ಕ್ರೀಡಾ ಕೂಟದಲ್ಲಿ ಭಾಗವಹಿಸಿ ವಿಜೇತರದ ಮಹಿಳೆಯರಿಗೆ ಬಹುಮಾನವನ್ನು ವಿತರಿಸಲಾಗಿತ್ತು. ಸರ್ಕಾರದ ವಿವಿಧ ಇಲಾಖೆಯ ಯೋಜನೆಗಳಲ್ಲಿ ಆಯ್ಕೆಯಾದ ಅರ್ಹ ಪಾನುಭವಿಗಳಿಗೆ, ಹೊಲಿಗೆ ಯಂತ್ರ ಹಾಗೂ ಸಹಾಯಧನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಡಾ. ಕುಮಾರ, ಕೈಮಗ್ಗ ಹಾಗೂ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ವಿಜಯಲಕ್ಷ್ಮಿ ರಘುನಂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಆಶಾ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಗ್ರೇಡ್ -1 ಡಾ. ಶಿವಲಿಂಗಯ್ಯ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಗ್ರೇಡ್ -2 ಲಕ್ಷ್ಮಿ ಹಾಗೂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಉದ್ದೇಶಪೂರ್ವಕವಾಗಿ ಜನಿವಾರ ತೆಗೆಸಿದ್ದು

ಮಹಾಶಿವರಾತ್ರಿ ಪ್ರಯುಕ್ತ ಲಾಡು ಪ್ರಸಾದದಿಂದ ₹1.46 ಕೋಟಿ ಸಂಗ್ರಹ

ಎಐಟಿಎ 14 ವರ್ಷದೊಳಗಿನವರ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಶ್ರೇಯಾಂಕಿತರಾಗಿರುವ ಪದ್ಮಪ್ರಿಯಾ

Leave a Comment