NEWS

ರಣವೀ‌ರ್ ಪರ ವಕೀಲರಿಂದ ಹೈಕೋರ್ಟ್‌ಗೆ ಮಾಹಿತಿ

ಪಾಲನೆ ನ್ಯೂಸ್

ಬೆಂಗಳೂರು: ದೈವಾರಾಧನೆಗೆ ಅಪಚಾರ ಎಸಗುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಕ್ಷಮೆ ಕೇಳಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಪ್ರಾಮಾಣಿಕತೆಯಿಲ್ಲ ಎಂದು ಪ್ರಕರಣದ ಅರ್ಜಿದಾರರು ವಾದಿಸಿದ್ದಾರೆ. ಆದ್ದರಿಂದ ಇನ್ನೊಮ್ಮೆ ಸರಿಯಾದ ರೀತಿಯಲ್ಲಿ ಕ್ಷಮೆ ಕೇಳಿ ಅಫಿಡವಿಟ್ ಸಲ್ಲಿಸಲು ರಣವೀ‌ರ್ ಸಿದ್ಧರಿದ್ದಾರೆ ಎಂದು ಅವರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಗೋವಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ದಲ್ಲಿ ದೈವಾರಾಧನೆಗೆ ಅವಮಾನವಾಗುವ ರೀತಿ ರಣವೀ‌ರ್ ಪರ ವಕೀಲರಿಂದ ಹೈಕೋರ್ಟ್‌ಗೆ ಮಾಹಿತಿ ವರ್ತಿಸಿದ್ದಾರೆ ಎಂದು ರಣವೀ‌ರ್ ವಿರುದ್ಧ ಬೆಂಗಳೂರಿನ ಹೈಗ್ರೇಂಡ್ಸ್ ಠಾಣೆಯಲ್ಲಿನ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಮುಂಬೈನ ಸಿಂಧಿ ಕುಟುಂಬದಲ್ಲಿ ಬೆಳೆದ ರಣವೀರ್‌ಗೆ ಈ ಆಚರಣೆಗಳ ಸೂಕ್ಷ್ಮತೆ ತಿಳಿದಿರಲಿಲ್ಲ. ‘ಕಾಂತಾರ’ ಚಿತ್ರದಲ್ಲಿನ ರಿಷಬ್ ಶೆಟ್ಟಿ ನಟನೆಯನ್ನು ಬಣ್ಣಿಸುವ ಭರದಲ್ಲಿ ಈ ರೀತಿ ಆಗಿದೆ ಎಂದರು. ಇದನ್ನು ಆಲಿಸಿದ ನ್ಯಾಯಪೀಠ, ಇನ್ನೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

52 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಹೊರಕ್ಕೆ: ಲಕ್ಷ್ಮೀ ಹೆಬ್ಬಾಳ್ಕರ್

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಲಾಯಿತು

Leave a Comment