ಪಾಲನೆ ನ್ಯೂಸ್
ವಾಷಿಂಗ್ಟನ್: ಇರಾನ್ ಮತ್ತೆ ಮಾತುಕತೆಗೆ ಬರುತ್ತದೆಯೋ ಅಥವಾ ಹಾಗೇ ಇರುತ್ತದೋ ಅನ್ನುವ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ. ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಅಮೆರಿಕ-ಇರಾನ್ ಶಾಂತಿ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಮುಕ್ತಾಯಗೊಂಡ ಬೆನ್ನಲ್ಲೇ ಟ್ರಂಪ್ ಅವರು ಈ ಬೆದರಿಕೆ ಹಾಕಿದ್ದಾರೆ.
ಫ್ಲೋರಿಡಾದಿಂದ ಹಿಂದಿರುಗಿದ ನಂತರ ಜಂಟಿ ಬೇಸ್ ಆಂಡ್ಯೂಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೆರಿಕದ ಹಿತಾಸಕ್ತಿಯೇ ತಮಗೆ ಮುಖ್ಯ ಎಂದು ಸ್ಪಷ್ಟಪಡಿಸಿದರು. ಇರಾನ್ ಮಾತುಕತೆಯ ಮೇಜಿಗೆ ಮರಳುತ್ತದೆಯೋ ಇಲ್ಲವೋ ಎಂಬುದು ನನಗೆ ಮುಖ್ಯವಲ್ಲ. ಅವರು ಬರದಿದ್ದರೆ ನನಗೇನು ನಷ್ಟವಿಲ್ಲ, ಏನೇ ಆದರೂ ಅಂತಿಮವಾಗಿ ನಾವೇ ಗೆಲ್ಲುತ್ತೇವೆ ಎಂದು ಅವರು ಪ್ರತಿಪಾದಿಸಿದರು.

ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆಯಲ್ಲಿ ಇರಾನ್ ಇನ್ನೂ ಪರಮಾಣು ಶಸ್ತ್ರಾಸ್ತ್ರಗಳ ತಯಾರಿಕೆಯಲ್ಲಿ ಆಸಕ್ತಿ ಹೊಂದಿದೆ ಎಂಬುದು ಸಾಬೀತಾಗಿದೆ. ಆದರೆ, ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರ ಹೊಂದಲು ಬಿಡುವುದಿಲ್ಲ ಎಂದು ಟ್ರಂಪ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
