NEWS

ಸರ್ಕಾರಿ ಶಾಲೆಗಳ ಉಳಿವಿಗೆ ಮೂಲ ಸೌಕರ್ಯ ಕಲ್ಪಿಸಿ

ಪಾಲನೆ ನ್ಯೂಸ್

ಮೈಸೂರು : ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು, ಹಾಗೂ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಶೇ.15 ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದೇ ಇರಲು ಹತ್ತಾರು ಕಾರಣಗಳಿವೆ.

ಅವುಗಳಲ್ಲಿ ಮುಖ್ಯವಾಗಿ, ಶಿಕ್ಷಕರ ಕೊರತೆ, ಶೌಚಾಲಯ ಮೊದಲಾದ ಮೂಲ ಸೌಕರ್ಯದ ಕೊರತೆ, ಕೆಲವು ಶಾಲೆಗಳಲ್ಲಿ ನುರಿತ ಶಿಕ್ಷಕರ ಕೊರತೆ ಮೊದಲಾದ ಕಾರಣಗಳಿಂದಾಗಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುತ್ತಿಲ್ಲ. ಶಾಲೆಗಳು ಆರಂಭವಾಗುವ ಮೊದಲೇ ಶಿಕ್ಷಕರ ನೇಮಕಾತಿ ಮತ್ತು ಶಿಥಿಲಗೊಂಡ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿದರೆ ಹಾಗೂ ಕನಿಷ್ಠ ಮೂಲ ಸೌಕರ್ಯವನ್ನು ಕಲ್ಪಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸಾಧ್ಯ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಡಿಜಿಟಲ್ ಮಾದರಿಯಲ್ಲಿ 2027ರ ಜನಗಣತಿ

ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಹೆಲಿ ಟೂರಿಸಂ ಆರಂಭಿಸುವ ಸಂಬಂಧ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಎಲ್ಲಾ ವರ್ಗದವರಿಗೂ ಕಾನೂನು ಅರಿವಿನ ಕಾರ್ಯಾಗಾರ ಅಗತ್ಯ

Leave a Comment