NEWS

ಅಕ್ಕರೆಯ ಅಂಗಳ ಬೇಸಿಗೆ ಶಿಬಿರಕ್ಕೆ ಚಾಲನೆ : ಕೆ.ಆರ್. ನಂದಿನಿ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾ ಪಂಚಾಯತ್ ಮಂಡ್ಯ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 299 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಏಪ್ರಿಲ್ 17 ರಿಂದ ಮೇ 26 ರ ವರೆಗೆ ಹಮ್ಮಿಕೊಂಡಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ರಿಂದ 13 ವರ್ಷದೊಳಗಿನ ಮಕ್ಕಳು ಪಾಲ್ಗೊಂಡು ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಮಾನ್ಯ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಕೆ.ಆರ್ ನಂದಿನಿ ರವರು ತಿಳಿಸಿದರು.

ಇಂದು ಮಂಡ್ಯ ತಾಲ್ಲೂಕು ಯಲಿಯೂರು ಗ್ರಾಮ ಪಂಚಾಯಿತಿಯ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿರುವ “ಅಕ್ಕರೆಯ ಅಂಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ” ವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇಸಿಗೆ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ವಿಶೇಷ ಆಟಗಳಿಗೆ ಒತ್ತು ನೀಡುವುದು ಶಿಬಿರದ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.


ಶಿಬಿರದಲ್ಲಿ ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವುದು, ಪರಿಸರ ಮತ್ತು ಸಾಮಾಜಿಕ ಕಾಳಜಿ ಬೆಳೆಸುವುದು, ಸ್ಥಳೀಯ ಸಂಸ್ಕೃತಿ ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಸುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿದ್ದು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಅಭಿವೃದ್ಧಿ) ಲಕ್ಷ್ಮಿ ಪಿ. ರವರು, ಕಾರ್ಯನಿರ್ವಾಹಕ‌ ಅಧಿಕಾರಿ ಲೋಕೇಶ್ ಮೂರ್ತಿ ರವರು, ಕ್ಷೇತ್ರಶಿಕ್ಷಣಧಿಕಾರಿಗಳು( ದಕ್ಷಿಣ ವಲಯ) ರವರು, ಸಹಾಯಕ ನಿರ್ದೇಶಕರು(ಗ್ರಾ.ಉ)ರವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಗ್ರಂಥಪಾಲಕರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಪ್ರತಿಭಾಂಜಲಿ ಆಯೋಜಿಸಿರುವ ಕಾವೆಂಶ್ರೀ ಕಾವ್ಯಯಾನ ಸಂಗೀತ ಸುಧೆ ಫೆ.14ಕ್ಕೆ

ಸಾರಾಯಿ ಕುಡಿಬೇಡ ಎಂದಿದ್ದಕ್ಕೆ 11ರ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ!

‘ಜೀರೋ ಟು ಹೀರೋ’: ಐದು ಭಾಷೆಗಳಲ್ಲಿ ಸಿನಿಮಾ ನಿರ್ಮಾಣ

Leave a Comment