NEWS

ವಿನಯ್ ಕುಲಕರ್ಣಿ ಸೇರಿ ದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ

ಪಾಲನೆ ನ್ಯೂಸ್

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾ ಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ಯೋಗೀಶ್ ಗೌಡ ಕುಟುಂಬಕ್ಕೆ 16 ಲಕ್ಷ ಪರಿಹಾರ: ಟಿಂಕರಿಕರ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗದೇ ಇದ್ದರೂ, ಭ್ರಷ್ಟಾಚಾರ ಎಸಗಿದ್ದಾರೆ ಅನ್ನೋ ಆರೋಪ ಸಾಬೀತಾದ ಹಿನ್ನೆಲೆ ಕೋರ್ಟ್ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ ಬಸವರಾಜ್ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಖಚಿತಪಡಿಸಿದೆ. ಮೃತ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಸೂಚನೆ ನೀಡಿದೆ.


ಏನಿದು ಪ್ರಕರಣ?: 2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ಒಪ್ಪಿಸಿತ್ತು. ಇಂಚಿಂಚು ತನಿಖೆ ನಡೆಸಿದ್ದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿತ್ತು. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಕೊಲೆ, ಯೋಗೀಶ್‌ ಗೌಡ ಕೊಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಇದನ್ನು ಜಮೀನು ವಿವಾದವೆಂದು ತನಿಖೆ ಮಾಡಿದ್ದರು. ನಂತರ ಯೋಗೇಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು.ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ. -ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ. ಇದರಲ್ಲಿ ಒಳಸಂಚು ಇದೆ. ಬಿ-ರಿಪೊರ್ಟ್ ಫೈಲ್ ಮಾಡುವ ಹಂತದಲ್ಲಿ ಅವರನ್ನು ಮತ್ತೆ ಸಿಲುಕಿಸಲಾಯಿತು.
ನಾನು ಅವರ ಕುಟುಂಬದ ಹತ್ತಿರ ಮಾತನಾಡಿದ್ದೇನೆ. ಅವರು ತಪ್ಪು ಮಾಡಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ನಾನು ಭಾವಿಸಿದ್ದೇನೆ. ಕಾನೂನಿನಲ್ಲಿ ಇನ್ನು ಅವಕಾಶ ಇದೆ.-ಡಿ.ಕೆ. ಶಿವಕುಮಾ‌ರ್,

ಡಿಸಿಎಂ ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿತ್ತು. ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನು ಕೋರ್ಟ್ ಖುಲಾಸೆಗೊಳಿತ್ತು. ಇನ್ನು ಇಬ್ಬರು ನಿರ್ದೋಷಿಗಳನ್ನು ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn


Related posts

ಕೀಲಾರದಲ್ಲಿ ರಾಜಸೂಯ ಯಾಗ ಪೌರಾಣಿಕ ನಾಟಕ ಪ್ರದರ್ಶನ

ಪುಸ್ತಕ ನಮ್ಮ ಜ್ಞಾನವನ್ನು ಹೆಚ್ಚಿಸುವ ಪರಮಾಪ್ತ ಮಿತ್ರ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅಭಿಪ್ರಾಯಪಟ್ಟರು.

ಶ್ರೀ ಕೃಷ್ಣ ದೇವರಾಯ ಜಯಂತಿ ಶುಭಾಶಯಗಳು

Leave a Comment