NEWS

ಖರ್ಗೆ ಕ್ಷಮೆ ಕೇಳುವಂತೆ ಅಶೋಕ್ ಆಗ್ರಹ

ಪಾಲನೆ ನ್ಯೂಸ್

ಬೆಂಗಳೂರು: ಪ್ರಧಾನಿ ಮೋದಿ ಅವರ ವಿರುದ್ಧ ‘ಭಯೋತ್ಪಾದಕ’ ಎಂಬ ಹೇಳಿಕೆ ನೀಡಿರುವಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಕ್ಷಮೆಯಾಚಿಸಬೇಕು. ಅವರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದಲ್ಲಿರಲು ಸೂಕ್ತರಲ್ಲ ಎಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಆ‌ರ್.ಅಶೋಕ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೋದಿ ಅತಿ ಹೆಚ್ಚು ದಿನಗಳ ಕಾಲ ಪ್ರಧಾನಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ದೇಶಪ್ರೇಮದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಎತ್ತಿ ಭಯೋತ್ಪಾದಕ ಎಂಬ ಪದಬಳಕೆ ಮಾಡಿದ್ದಾರೆ. ಹಿಂದೆ ಅವರನ್ನು ಚಾಯ್‌ವಾಲಾ ಎಂದು ಟೀಕೆ ಮಾಡಿದಾಗ ಅದನ್ನೇ ಅಭಿ ಯಾನ ಮಾಡಲಾಯಿತು. ಇವರ ಟೀಕೆಗಳೇ ಬಿಜೆಪಿಗೆ ವರ ವಾಗಿದೆ. ಇನ್ನೆಂದೂ ಅಧಿಕಾರ ಸಿಗಲ್ಲ ಎಂಬ ಆತಂಕದಿಂದ ಕಾಂಗ್ರೆಸ್ ನಾಯಕರು ಈ ರೀತಿ ಮಾತಾಡುತ್ತಿದ್ದಾರೆ ಎಂದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ: ಸಿಬಿಐ ತನಿಖೆಗೆ ಕೆ.ಆರ್.ರವೀಂದ್ರ

ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿ

Leave a Comment