NEWS

ಮಂಡ್ಯ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಪಾಲನೆ ನ್ಯೂಸ್

ಮಂಡ್ಯ : ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಅವರು ಇಂದು ಮಂಡ್ಯ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಕಡತಗಳ ವಿಲೇವಾರಿ, ಸಾರ್ವಜನಿಕರ ಅರ್ಜಿಗಳ ಪರಿಶೀಲನೆ, ಹಾಜರಾತಿ ಮತ್ತು ಕಚೇರಿಯ ಸ್ವಚ್ಛತೆಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸರ್ಕಾರಿ ಕೆಲಸಗಳಿಗೆ ಅನಗತ್ಯವಾಗಿ ಅಲೆದಾಡಿಸದಂತೆ ಸಾರ್ವಜನಿಕರಿಗೆ ತ್ವರಿತ ಸೇವೆ ನೀಡಲು ಮತ್ತು ಕೆಲಸಗಳನ್ನು ವಿಳಂಬ ಮಾಡದಂತೆ ತಹಶೀಲ್ದಾರ್ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಂಡ್ಯ ತಹಶೀಲ್ದಾರ್ ವಿಶ್ವನಾಥ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

*ದೌರ್ಜನ್ಯ ಪ್ರಕರಣಗಳು ಮತ್ತು ಅಸ್ಪೃಶ್ಯತೆ ಯನ್ನು ಜಿಲ್ಲೆಯಿಂದ ಮುಕ್ತ ಗೊಳಿಸಿ – ಡಾ. ಮೂರ್ತಿ ಎಲ್.

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೂ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ

Leave a Comment