NEWS

ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಕುದುರೆಗುಂಡಿ ಹಾಗೂ ಮಂಡ್ಯ ತಾಲ್ಲೂಕಿನ ನೋದೆಕೊಪ್ಪಲು ಗ್ರಾಮಗಳ ರೈತರ ಸಭೆ

ಜಿಲ್ಲಾಧಿಕಾರಿಗಳು ಮತ್ತು KIADB ಅಧಿಕಾರಿಗಳಿಂದ ರೈತರಿಂದ ಅಹವಾಲು ಹಾಗೂ ಅಭಿಪ್ರಾಯ ಸ್ವೀಕಾರ

ಪಾಲನೆ ನ್ಯೂಸ್

ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಮತ್ತು ಕುದುರಗುಂಡಿ ಗ್ರಾಮ ಹಾಗೂ ಮಂಡ್ಯ ತಾಲ್ಲೂಕಿನ ನೋದೆ ಕೊಪ್ಪಲು ಗ್ರಾಮಗಳಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಂಡಿದ್ದು ಭೂಸ್ವಾಧೀನ ಪ್ರಕ್ರಿಯೆಯ ಸಂಬಂಧ ರೈತರಿಂದ ಅಹವಾಲು ಹಾಗೂ ಅಭಿಪ್ರಾಯವನ್ನು ಜಿಲ್ಲಾಧಿಕಾರಿ ಡಾ ಕುಮಾರ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸ್ವೀಕಾರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಭೂಮಿಗೆ ನೀಡಲಾಗುವ ಪರಿಹಾರದ ಮೊತ್ತದ ಬಗ್ಗೆ ರೈತರಲ್ಲಿ ಅಸಮಾಧಾನವಿದ್ದರೆ ಹೆಚ್ಚು ಪರಿಹಾರ ನೀಡುವಂತೆ ರೈತರು ಮನವಿ ಸಲ್ಲಿಸಬಹುದು. ಈ ಮನವಿಯನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಸರ್ಕಾರವು ಪ್ರಾಥಮಿಕ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧ ರೈತರು ತಮ್ಮ ಆಕ್ಷೇಪಣೆಗಳನ್ನು ದಾಖಲಿಸಲು ಕಾನೂನಾತ್ಮಕ ಅವಕಾಶವಿರುತ್ತದೆ ಎಂದು ಅವರು ತಿಳಿಸಿದರು.

ಪ್ರಾಧಮಿಕ ಅಧಿಸೂಚನೆ ಹೊರಡಿಸಿದ ನಂತರ ಭೂ ಸ್ವಾಧೀನ ಪ್ರಕ್ರಿಯೆ ಅರ್ಥದಲ್ಲಿ ನಿಂತಿರುವುದರಿಂದ ರೈತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ನಂತರ ಕಾನೂನು ರೀತಿ ಕ್ರಮ ಕೖಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಬೆಂಗಳೂರಿನ ವಿಶೇಷ ಭೂ ಸ್ವಾಧೀನ ಅಧಿಕಾರಿ ಎ. ಎನ್. ರಘುನಂದನ್, ಜಿಲ್ಲಾ ಕೖಗಾರಿಕೆ ಇಲಾಖೆಯ ಉಪ ನಿರ್ದೇಶಕ ದಿನೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತರ ಅಭಿಪ್ರಾಯ

ಕೃಷಿಯನ್ನೇ ನಂಬಿ ಬದುಕುತ್ತಿರುವ ಕುಟುಂಬಗಳು ಭೂಮಿಯನ್ನು ಕಳೆದುಕೊಂಡರೆ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ ಎಂಬುದು ಸಭೆಯಲ್ಲಿ ಎಲ್ಲ ರೈತರ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಭೂಮಿಯು ಅತ್ಯಂತ ಫಲವತ್ತಾದ ಕೃಷಿ ಭೂಮಿಯಾಗಿದ್ದು, ನೀರಾವರಿ ಸೌಲಭ್ಯವನ್ನು ಹೊಂದಿದೆ. ಯಾವುದೇ ಕಾರಣಕ್ಕೂ ಭೂಮಿಯನ್ನು ನೀಡಲು ಆಗುವುದಿಲ್ಲ ಎಂದು ಸಭೆಯಲ್ಲಿ ರೈತರು ತಿಳಿಸಿದರು.

ಸರ್ಕಾರವು ಭೂಮಿ ನೀಡುವ ರೈತರಿಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಪರಿಹಾರ ನೀಡಿದರೆ ಭೂಮಿ ನೀಡುತ್ತೇವೆ ಎಂದು ಕೆಲವು ರೈತರು ತಿಳಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವೆಸ್ಟ್ಇಂಡೀಸ್‌ಗೆ ಇಟಲಿ ವಿರುದ್ದ ಜಯ

ಇನ್ನು ಮುಂದೆ ಆನ್‌ಲೈನ್‌ ಗೇಮ್‌ಗೆ ರೂಲ್ಸ್

ತಮಿಳುನಾಡಿನ ರಾಜಕೀಯದಲ್ಲಿ ಹೊಸ ತಿರುವು

Leave a Comment