NEWS

ಸಾರ್ವಜನಿಕ ಅಭಿಪ್ರಾಯ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ

ಪಾಲನೆ ನ್ಯೂಸ್

ಬೆಂಗಳೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸ್ಥಾನಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ಪ್ರಕರಣ 5(1) ರಂತೆ ನಿಗಧಿಪಡಿಸಿಲಾಗಿರುತ್ತದೆ. ಈ ವಿವರಗಳನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ವೆಬ್ ಸೈಟ್ ನಲ್ಲಿ https://rdpr.karnataka.gov.in/rdc/public. ಮತ್ತು ದಿನಾಂಕ: 18.04.2026 ರ ಕರ್ನಾಟಕ ವಿಶೇಷ ರಾಜ್ಯ ಪತ್ರದಲ್ಲಿ (ರಾಜ್ಯ ಪತ್ರದ ವಿಳಾಸ “https://erajyapatra.karnataka.gov.in ) ಪ್ರಕಟಿಸಲಾಗಿರುತ್ತದೆ.

ಪ್ರಚಾರ ನೀಡಲು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಂಬಂಧಪಟ್ಟ ವಿಶೇಷ ರಾಜ್ಯಪತ್ರದ ಪ್ರತಿಯನ್ನು ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಿ ಸಾರ್ವಜನಿಕ ಅಭಿಪ್ರಾಯ / ಆಕ್ಷೇಪಣೆಗಳನ್ನು ಆನ್‌ಲೈನ್ ಮುಖಾಂತರ ಆಯೋಗದ ವೆಬ್‌ಸೈಟ್‌ನಲ್ಲಿ ಮತ್ತು ಖುದ್ದಾಗಿ ಅಂಚೆ ಮೂಲಕ ಬೆಂಗಳೂರಿನ ಆಯೋಗದ ಕಛೇರಿಯಲ್ಲಿ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಬೆಂಗಳೂರು ರವರ ಪತ್ರದ ಸಂಖ್ಯೆ:ಕಪಂರಾಸೀನಿಆ/44/ಪಪ್ರ/2022, ದಿ:18.04.2026 ಮತ್ತು ದಿ:21.04.2026 ರಲ್ಲಿ ಪ್ರಕಟಿಸಿರುವ ಪ್ರಕಟಣೆಯ ಕುರಿತಂತೆ ಏಪ್ರಿಲ್ 24 ರೊಳಗಾಗಿ ಆಕ್ಷೇಪಣಿ ಮತ್ತು ಅಹವಾಲುಗಳನ್ನು ಸಲ್ಲಿಸಿರುವವರಿಗೆ ಏಪ್ರಿಲ್ 27 ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್ -ನಂ-2, 2ನೇ ಮಹಡಿ ಕೊಠಡಿ ಸಂಖ್ಯೆ: 229 ಮತ್ತು 230, ಬಹುಮಹಡಿಗಳ ಕಟ್ಟಡ, ಬೆಂಗಳೂರು ಇಲ್ಲಿ ನಡೆಯುವ ಅದಾಲತ್‌ನಲ್ಲಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವಿಕೆಟ್ ಕೀಪರ್ -ಆರಂಭಿಕ ಸಂಜು ಸ್ಯಾಟ್ಸನ್ ಮತ್ತು ವೇಗಿ ಜಸ್‌ಪ್ರೀತ್ ಬುಮ್ರಾ ಐಸಿಸಿ ಪ್ರಶಸ್ತಿ ರೇಸ್‌ನಲ್ಲಿ

ಮದುವೆ ನೋಂದಣಿಗೆ ಪೋಷಕರ ಸಮ್ಮತಿ ಕಡ್ಡಾಯ ಕಾಯಿದೆ ಸ್ವಾಗತಾರ್ಹ

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ : ದಾಸಪ್ಪ

Leave a Comment