NEWS

ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿ

ಪಾಲನೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಗಳ ಮೂಲಕ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೇವೆ ಒದಗಿಸುವ ಸಂಬಂಧ ಒಪ್ಪಂದಕ್ಕೆ ಆರ್ ಡಿಪಿಆ‌ರ್ ಇಲಾಖೆಯ ಇ-ಆಡಳಿತ ಮತ್ತು ಇಡಿಸಿಎಸ್ ನಿರ್ದೇಶನಾಲಯ ಒಪ್ಪಂದಕ್ಕೆ ಸಹಿ ಹಾಕಿವೆ.

ಹೊಸ ಖಾತಾ ಸೇವೆಗೆ 45 ರು. ಶುಲ್ಕ ನಿಗದಿಪಡಿಸಿದ್ದು, ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು, ಇ-ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್‌ಲೋಡ್ ಮಾಡಲು ಪ್ರತಿಪುಟಕ್ಕೆ ಐದು ರು. ಪಾವತಿಸಬೇಕಾಗುವುದು. ಎಲ್ಲ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೆ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಚಲಾವಣೆಯಲ್ಲಿ ಇಲ್ಲದ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನ

ಹೊರಗೆ ಎರಡು ರೈಲುಗಳ ನಡುವೆ ಭೀಕರ ಅಪಘಾತದಲ್ಲಿ 14 ಮಹಿಳೆಯರ ಸಾವು

17 ವರ್ಷದ ಬಾಲಕಿ ಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ

Leave a Comment