NEWS

ದಿಲ್ಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ: ಉಪಮುಖ್ಯಮಂತ್ರಿ

ಪಾಲನೆ ನ್ಯೂಸ್

ನವದೆಹಲಿ: ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಯಾರು ಎಂದು ಹೇಳುವುದಿಲ್ಲ ಎಂದಿ ರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕ ವಾಗಿ ಮಾತನಾಡಿದ್ದಾರೆ.


ದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ನಮ್ಮ ನಾಯಕರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ನಾಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿದ್ದೇನೆ. ಬೆಂಗಳೂರು ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು. ರಾಜ್ಯದಲ್ಲಿ ಬದಲಾವಣೆಗಳ ಬಗ್ಗೆ ನಾನು ಮಾಧ್ಯಮಗಳ ಮುಂದೆ ಮಾತಾಡುವುದಿಲ್ಲ ಎಂದ ಅವರು, ಅಲ್ಪಸಂಖ್ಯಾತ ನಾಯಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದರಲ್ಲಿ ತಪ್ಪಿಲ್ಲ. ಕೆಲವು ಬಾರಿ ನಮ್ಮ ಕಡೆಯಿಂದ ತಪ್ಪಾಗಿಬಹುದು. ಕೆಲವು ಬಾರಿ ಅವರ ಕಡೆಯಿಂದ ತಪ್ಪಾಗಿರಬಹುದು ಎಂದು ತಿಳಿಸಿದರು.
ನಾಳೆ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಭೇಟಿಗೆ ಅವಕಾಶ ಕೇಳಿದ್ದೇನೆ. ಇನ್ನು ಅಮಾನತು ವಾಪಸ್ ಪಡೆಯುವ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ, ಇದು ಅಮಾನತು ಅಲ್ಲ. ಬದಲಿಗೆ ಅವರೇ ರಾಜೀನಾಮೆ ಕೊಟ್ಟಿದ್ದಾರೆ. ಒಮ್ಮೆ ರಾಜೀನಾಮೆ ಪತ್ರ ವಿಶ್ಲೇಷಣೆ ಮಾಡಿ ಎಂದು ತಿಳಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅವರು ಶ್ರೀರಂಗಪಟ್ಟಣ ತಾಲೂಕಿನ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೇರಳದ ಶ್ರೀನಂದಾ ಶವವಾಗಿ ಪತ್ತೆ

ತಂಬಾಕು ಮೇಲಿನ ಅಬಕಾರಿ ಸುಂಕ ಹಿಂದಕ್ಕೆ ಪಡೆದ ಕೇಂದ್ರ ಸರ್ಕಾರ

Leave a Comment