NEWS

ಮಂಡ್ಯ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 5ನೇ ಸ್ಥಾನ: ಸಚಿವ ಚಲುವರಾಯಸ್ವಾಮಿ ಹರ್ಷ

ಪಾಲನೆ ನ್ಯೂಸ್

ಮಂಡ್ಯ : ಏಪ್ರಿಲ್ 23: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಯವರಪ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ್,ಸಿಇಓ ಕೆ ಆರ್ ನಂದಿನಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ಸಚಿವರು, “ಮಂಡ್ಯ ಜಿಲ್ಲೆ ಈ ಬಾರಿ ಶೇ. 97.45 ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ಇದು ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಬದ್ಧತೆ, ಪೋಷಕರ ಸಹಕಾರ ಮತ್ತು ಅಧಿಕಾರಿಗಳ ಸಮರ್ಥ ನಿರ್ವಹಣೆಯ ಫಲ. ಉಡುಪಿ,ಮಂಗಳೂರು ವಿದ್ಯಾರ್ಥಿಗಳ ಜೊತೆ ಪೈಪೋಟಿ ನೀಡಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ 12ನೇ ಸ್ಥಾನದಲ್ಲಿದ್ದ ನಮ್ಮ ಜಿಲ್ಲೆ ಈ ಬಾರಿ 5 ನೇ ಸ್ಥಾನ ಮೇಲೇರಿರುವುದಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಗೆ ಸಾಕ್ಷಿ” ಎಂದು ತಿಳಿಸಿದ್ದಾರೆ.

“ಮುಂದಿನ ವರ್ಷ ನಾವು ಮೊದಲ 3 ಸ್ಥಾನಗಳ ಗುರಿ ಹೊಂದಬೇಕು. ಇದಕ್ಕಾಗಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು. ಗ್ರಾಮೀಣ ಮಕ್ಕಳಿಗೆ ವಿಶೇಷ ತರಬೇತಿ, ಮೂಲಸೌಕರ್ಯ ಸುಧಾರಣೆ, ಡಿಜಿಟಲ್ ಶಿಕ್ಷಣಕ್ಕೆ ಒತ್ತು ನೀಡಲಾಗುವುದು” ಎಂದು ಸಚಿವರು ಭರವಸೆ ನೀಡಿದರು.

“ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ. ಅನುತ್ತೀರ್ಣರಾದ ಮಕ್ಕಳು ಧೃತಿಗೆಡದೆ ಪೂರಕ ಪರೀಕ್ಷೆಗೆ ಸಿದ್ಧರಾಗಿ. ಸೋಲು ಯಶಸ್ಸಿನ ಮೆಟ್ಟಿಲು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಶೇ.50 ಕ್ಕಿಂತ ಕಡಿಮೆ ಅಂಕ ಪಡೆದ ಮಕ್ಕಳಿಗೆ ಕಲಿಕಾ ಮಿತ್ರ ಎಂಬ ಪುಸ್ತಕ ತಯಾರು ಮಾಡಿ ಜಿಲ್ಲೆಯಾದ್ಯಂತ ವಿಶೇಷ ತರಬೇತಿ ನೀಡಿ ಮಂಡ್ಯ ಜಿಲ್ಲೆ 5ನೇ ಸ್ಥಾನಕ್ಕೆ ಬರಲು ಶ್ರಮಿಸಿದ ಜಿಲ್ಲಾಧಿಕಾರಿ ಡಾ.ಕುಮಾರ್ ಮತ್ತು ಜಿಪಂ ಮುಖ್ಯಕಾರ್ಯನಿವಾಹಣಾಧಿಕಾರಿ(CEO) ಕೆ ಆರ್ ನಂದಿನಿ ಯವರ ಶ್ರಮ ನಿಜಕ್ಕೂ ಮೆಚ್ಚುವಂತದ್ದೆಂದು ಈ ಇಬ್ಬರು ಅಧಿಕಾರಿಗಳಿಗೆ ಸಚಿವ ಎನ್ ಚಲುವರಾಯಸ್ವಾಮಿ ಅಭಿನಂದಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಡಿಜಿಟಲ್ ಮೋಡ್ ನಲ್ಲಿ ನಡೆಯುತ್ತಿರುವ ಮೊದಲ ಜನಗಣತಿ

ಫೆ.2ರಂದು ಎಂ.ಶ್ರೀನಿವಾಸ್ ಅಭಿನಂದನಾ ಗ್ರಂಥ ಬಿಡುಗಡೆ, ಪ್ರಶಸ್ತಿ ಪ್ರದಾನ ಸಮಾರಂಭ

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖದ ಪಠ್ಯಪುಸ್ತಕ ನಿಷೇಧ ಮುದ್ರಿತ

Leave a Comment