NEWS

ಹೊರಗೆ ಎರಡು ರೈಲುಗಳ ನಡುವೆ ಭೀಕರ ಅಪಘಾತದಲ್ಲಿ 14 ಮಹಿಳೆಯರ ಸಾವು

ಪಾಲನೆ ನ್ಯೂಸ್

ಬೆಕಾಸಿ: ಇಂಡೋನೇಷ್ಯಾದ ಹೊರಗೆ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಹಿಳೆಯರು ಸಾವಿಗೀಡಾಗಿದ್ದು, 80ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಕಾರ್ತಾದ ಹೊರಗಿನ ಬೆಕಾಸಿ ತಿಮೂರ್ ನಿಲ್ದಾಣದಲ್ಲಿ ನಿಲ್ಲಿಸಲಾದ ಪ್ರಯಾಣಿಕ ರೈಲಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಈ ರೈಲು ಮಹಿಳೆಯರಿಗೆ ಮಾತ್ರ ಮೀಸಲಾಗಿತ್ತು. ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ರೈಲ್ವೆ ಕಂಪೆನಿ ಪಿಟಿ ಕೆರೆಟಾ ಅಪಿ ಇಂಡೋನೇಷ್ಯಾದ ಸಿಇಒ ಬಾಬಿ ರಸೈದಿನ್ ಹೇಳಿದ್ದಾರೆ.

ಮಧ್ಯಾಹ್ನದ ವೇಳೆಗೆ ರಕ್ಷಣಾ ತಂಡಗಳು ಅವಶೇಷಗಳ ಒಳಗಿನಿಂದ ಮೃತದೇಹಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ಪೂರ್ಣಗೊಳಿಸಿದವು. ಸಾವಿನ ಸಂಖ್ಯೆ ಏರಿಕೆಯಾಗುವುದಿಲ್ಲ ಎಂದು ರಾಷ್ಟ್ರೀಯ ಶೋಧ ಮತ್ತು ರಕ್ಷಣಾ ಸಂಸ್ಥೆಯ ಮುಖ್ಯಸ್ಥ ಮೊಹಮ್ಮದ್ ಸಯಾಫಿ ಹೇಳಿದರು.

ಆರ್ಗೋ ಟ್ರೋಮೋ ಅಂಗ್ರೆಕ್ ದೀರ್ಘ – ದೂರ ರೈಲಿನಲ್ಲಿದ್ದ ಎಲ್ಲಾ 240 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜಕಾರ್ತಾ ಪೊಲೀಸ್ ಮುಖ್ಯಸ್ಥ ಅಸೆಪ್ ಎಡಿ ಸುಹೇರಿ ಘಟನಾ ಸ್ಥಳದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಯಾವುದೇ ಸಮಸ್ಯೆ ಸಂಘರ್ಷದಿಂದ ಬಗೆಹರಿಯದು: ಮೋದಿ

ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ಉಚಿತ ತರಬೇತಿ ಶಿಬಿರ

ಮೂರು ವರ್ಷಗಳಿಂದ * 8,171 ಕೋಟಿ ಸೈಬರ್ ವಂಚಕರ ಪಾಲಾಗಿದೆ

Leave a Comment