ಪಾಲನೆ ನ್ಯೂಸ್
ಅಹಮದಾಬಾದ್: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪ್ರಚಂಡ ಗೆಲುವಿನೊಂದಿಗೆ ಬೀಗುತ್ತಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ -190 ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಮೂಲಕ ಪ್ಲೇಆಫ್ ಪ್ರವೇಶ ಬಹುತೇಕ ಖಚಿತಪಡಿಸಿಕೊಳ್ಳುವ ಹಂಬಲದಲ್ಲಿದೆ. ರಜತ್ ಪಾಟೀದಾರ್ ಬಳಗ ನಮೋ ಕ್ರೀಡಾಂಗಣದಲ್ಲಿ ಗುರುವಾರ ಆತಿಥೇಯ ಗುಜರಾತ್ ಟೈಟಾನ್ಸ್ ಸವಾಲು ಎದುರಿಸಲಿದ್ದು, ಗೆಲುವಿನ ಲಯ ಕಾಯ್ದುಕೊಳ್ಳುವ ನಿರೀಕ್ಷೆ ಇದೆ.

ಟೂರ್ನಿಯಲ್ಲಿ ಆಡಿರುವ 8ರಲ್ಲಿ 6 ಜಯ, 2 ಸೋಲಿನೊಂದಿಗೆ ಅಂಕಪಟ್ಟಿಯ ಎರಡನೇ ಸ್ಥಾನದಲ್ಲಿರುವ ಆರ್‌ಸಿಬಿ ಈ ಬಾರಿಯೂ ಪ್ರಶಸ್ತಿ ಫೇವರಿಟ್ ಎನಿಸಿದೆ. ಗುಜರಾತ್ ತಂಡ ಅಷ್ಟೇ ಪಂದ್ಯಗಳಲ್ಲಿ ತಲಾ 4 ಗೆಲುವು-ಸೋಲು ಕಂಡಿದ್ದು, ಅಂಕಪಟ್ಟಿಯ ಮಧ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದು, ಪ್ಲೇಆಫ್‌ಗೇರುವ ಅವಕಾಶ ವೃದ್ಧಿಸಿಕೊಳ್ಳಲು ಜಯದ ಅನಿವಾರ್ಯತೆಯಲ್ಲಿದೆ. ಬೆಂಗಳೂರಿನಲ್ಲಿ ಎದುರಾದ ಸೋಲಿಗೆ ತವರಿನಂಗಣದಲ್ಲಿ ಮುಯ್ಯ ತೀರಿಸುವ ಛಲ ಗುಜರಾತ್ ತಂಡದ್ದಾಗಿದೆ. ಸಿಎಸ್ ಕೆ ಎದುರು ಹಿಂದಿನ ಪಂದ್ಯದಲ್ಲಿ ಗೆದ್ದಿರುವ ಆತ್ಮವಿಶ್ವಾಸದಲ್ಲಿರುವ ಗುಜರಾತ್ ಅಗ್ರ ಕ್ರಮಾಂಕದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆರ್‌ಸಿಬಿ ವಿರುದ್ಧ ಶತಕ ಸಿಡಿಸಿ ಫಾರ್ಮ್‌ಗೆ ಮರಳಿರುವ ಸಾಯಿ ಸುದರ್ಶನ್ (322), ಶುಭಮಾನ್ ಗಿಲ್ (330) ಆರೆಂಕ್ ಕ್ಯಾಪ್ ರೇಸ್‌ನಲ್ಲಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
