NEWS

ರಜೆಯಲ್ಲಿರುವ ಶಿಕ್ಷಕರಿಗೆ ತಕ್ಷಣ ಕರ್ತವ್ಯಕ್ಕೆ

ಪಾಲನೆ ನ್ಯೂಸ್

ಬೆಂಗಳೂರು: ಜನಗಣತಿ ಎಂಬುದು ರಾಷ್ಟ್ರೀಯ ಕರ್ತವ್ಯವಾಗಿದೆ. ಆ ಜವಾಬ್ದಾರಿಗೆ ಬದ್ಧರಾಗಿರಬೇಕು ಎಂದು ಹೇಳಿರುವ ಹೈಕೋರ್ಟ್, ರಜೆಯಲ್ಲಿರುವ ಶಿಕ್ಷಕರಿಗೆ ತಕ್ಷಣ ಕರ್ತವ್ಯಕ್ಕೆ ಹಿಂದಿರುಗಿ, ಗಣತಿ ಕಾರ್ಯದಲ್ಲಿ ಭಾಗಿಯಾಗಲು ಸೂಚನೆ ನೀಡಬೇಕು ಎಂದು ನಗರದ ಖಾಸಗಿ ಶಾಲೆಯೊಂದಕ್ಕೆ ನಿರ್ದೇಶನ ನೀಡಿದೆ.

ಶಿಕ್ಷಕರನ್ನು ಜನಗಣತಿಗೆ ನಿಯೋಜನೆ ಮಾಡದ ಶಾಲೆಯ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಪ್ರಧಾನ ಜನಗಣತಿ ಅಧಿಕಾರಿ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ಶಾಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿದೆ.

ಮುಂದಿನ ಒಂದು ವಾರದಲ್ಲಿ ಎಲ್ಲ ಶಿಕ್ಷಕರನ್ನು ಹಿಂದಿರುಗುವಂತೆ ಸೂಚನೆ ನೀಡಿ, ಜನಗಣತಿ ಆಯುಕ್ತರ ಮುಂದೆ ವರದಿ ಮಾಡಿಕೊಳ್ಳುವುದನ್ನು ಖಾತರಿಪಡಿಸಬೇಕು ಎಂಬ ಷರತ್ತಿನೊಂದಿಗೆ ಶಾಲೆಯ ಪ್ರಾಂಶುಪಾಲರ ವಿರುದ್ಧ ಎಫ್‌ಐಆ‌ರ್ ದಾಖಲಿಸುವಂತಹ ಕ್ರಮಕ್ಕೆ ಮುಂದಾಗಬಾರದು ಎಂದು ಗಣತಿ ಆಯುಕ್ತರಿಗೆ ಸೂಚಿಸಿದೆ. 10ರಿಂದ 11 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ. ಹೀಗಿರುವಾಗ ಶಾಲೆಯ ಮುಖ್ಯಸ್ಥರು ಈ ರೀತಿಯಲ್ಲಿ ವರ್ತಿಸುವುದು ತಪ್ಪು ಎಂದಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಾರ್ಚ್ 11 ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ -2026

ಇಂದು ಎಂಆರ್‌ಎಂ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ

ಮ್ಯೂಚುವಲ್ ಫಂಡ್ ಎಂದರೇನು? ಅದು ಹೇಗೆ ಕಾರ್ಯನಿರ್ವಹಿಸುತ್ತದೆ?

Leave a Comment