NEWS

ಅಪ್ರಾಪ್ತ ವಯಸ್ಸಿನ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿರುವ‌ ಮೂವರು ವೈದ್ಯರ ಬಂಧನ

ಪಾಲನೆ ನ್ಯೂಸ್

ಮಂಡ್ಯ: ಕೆ.ಆ‌ರ್.ಪೇಟೆಯ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ನಿಯಮ ಉಲ್ಲಂಘಿಸಿ ಅಪ್ರಾಪ್ತ ವಯಸ್ಸಿನ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಿ ರುವ ಆರೋಪದ ಮೇರೆಗೆ ಮೂವರು ವೈದ್ಯ ರನ್ನು ಬಂಧಿಸಲಾಗಿದೆ.

ಕೆ.ಆ‌ರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯ ಚೇತನಾ, ನಾವಿ ಡಯಾಗೋಸ್ಟಿಕ್ ಸೆಂಟರ್‌ನ ಡಾ.ಹರ್ಷಿತಾ, ಕುಶಾಲ್ ಡಯಾಗೋಸ್ಟಿಕ್ ಸೆಂಟರ್‌ನ ಡಾ.ಹರೀಶ್ ಆವ ರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿ, ನ್ಯಾಯಾಲಯವು ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಉಳಿದಂತೆ, ಡಾ.ಪ್ರಿಯಾಂಕ ಎಂಬ ವೈದ್ಯೆ ತಲೆಮರೆಸಿ ಕೊಂಡಿದ್ದು, ಶೋಧಕಾರ್ಯ ಮುಂದುವರಿದಿದೆ.
ಕೆ.ಆ‌ರ್.ಪೇಟೆ ಪುರಸಭೆ ವ್ಯಾಪ್ತಿಯಲ್ಲಿರುವ ನಾವಿ ಡಯೋಗೋಸ್ಟಿಕ್ ಮತ್ತು ಕುಶಾಲ್ ಡಯೋ ಗೋಸ್ಟಿಕ್ ಸೆಂಟರ್‌ಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡುತ್ತಿರುವ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅಲ್ವಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಗಳನ್ನು ಆಕ್ರಮವಾಗಿ ಬಳಕೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವಾಣಿಜ್ಯ ತೆರಿಗೆ ಇಲಾಖೆ 410 ಕೋಟಿ ರೂ. ಜಿಎಸ್‌ಟಿ ವಂಚನೆ

ಆದಿಚುಂಚನಗಿರಿಯಲ್ಲಿ ಗಂಗಾಧರೇಶ್ವರ ಸ್ವಾಮಿ ರಥೋತ್ಸವ

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತಾಧಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಿ : ದರ್ಶನ್ ಪುಟ್ಟಣ್ಣಯ್ಯ

Leave a Comment