NEWS

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದ ಬಗ್ಗೆ ತನಿಖೆ

ಪಾಲನೆ ನ್ಯೂಸ್

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯನಿರ್ವಾಹಕ ಇಂಜಿನಿಯರ್ ನನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಜಿಬಿಎ ಆಯುಕ್ತರ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ, ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದರು. ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು.

ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷಪರಿಹಾರಘೋಷಣೆಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕಸ್ಟಮ್ಸ್ ಅಧಿಕಾರಿಗಳಿಂದ ಭರ್ಜರಿ ಬೇಟೆ

ಮತ್ತೆ ಏರಿಕೆ ಕಂಡ ಚಿನ್ನ

ಆರ್‌ಸಿಬಿ ಪಂದ್ಯ ಬಗ್ಗೆ ಚಿನ್ನಸ್ವಾಮಿಯಲ್ಲಿ ನಾಡಿದ್ದು ಅಂತಿಮ ನಿರ್ಧಾರ?

Leave a Comment