NEWS

ಕೂಡಲೇ ಶೃಂಗೇರಿ ಫಲಿತಾಂಶ ಪ್ರಕಟಿಸಿ ಎಂದ ಆರ್‌.ಅಶೋಕ

ಪಾಲನೆ ನ್ಯೂಸ್

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್‌ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್‌ ಆದೇಶ ಪಾಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 52 ಅಂಚೆ ಮತಗಳು ಬಿಜೆಪಿ ಅಭ್ಯರ್ಥಿ ಡಿ.ಎನ್‌.ಜೀವರಾಜ್‌ ಅವರಿಗೆ ದೊರೆತಿದೆ. ಮತ ಎಣಿಕೆಯಲ್ಲಿ ಯಾರಿಗೆ ಹೆಚ್ಚು ಮತ ಬರುತ್ತದೋ ಅದನ್ನು ಘೋಷಿಸಬೇಕೆಂದು ಕೋರ್ಟ್‌ ಆದೇಶದಲ್ಲಿ ಹೇಳಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದಾಗ, ಹೈಕೋರ್ಟ್‌ಗೆ ಮಾಹಿತಿ ನೀಡುತ್ತೇವೆ ಎಂದು ಸಬೂಬು ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರ ಚುನಾವಣಾಧಿಕಾರಿಯ ಮೇಲೆ ಒತ್ತಡ ಹೇರಿ ಫಲಿತಾಂಶವನ್ನು ತಡೆಹಿಡಿದಿದೆ. ಈ ಮೂಲಕ ಕೋರ್ಟ್‌ ಆದೇಶ ಉಲ್ಲಂಘಿಸಲಾಗಿದೆ. ಇದು ರಾಜ್ಯದ ಜನತೆಗೆ ಬಗೆದ ದ್ರೋಹ ಎಂದರು.

ವೋಟ್‌ ಚೋರಿ ಎನ್ನುವ ರಾಹುಲ್‌ ಗಾಂಧಿ ಈಗ ಎಲ್ಲಿದ್ದಾರೆ? ಬಿಜೆಪಿ ಪರವಾಗಿ ಫಲಿತಾಂಶ ಬರಲಿದೆ ಎಂದು ತಿಳಿದಾಕ್ಷಣ ಅಧಿಕಾರಿಗಳು ಉಲ್ಟಾ ಹೊಡೆದಿದ್ದಾರೆ. ಪ್ರತಿ ಬಾರಿ ಅಂಚೆ ಮತಗಳನ್ನು ಮೊದಲು ಎಣಿಸುತ್ತಾರೆ. ಬಳಿಕ ಮತಯಂತ್ರದಲ್ಲಿ ಮತಗಳನ್ನು ಎಣಿಸಲಾಗುತ್ತದೆ. ಆದರೆ ಶೃಂಗೇರಿಯಲ್ಲಿ ಎಲ್ಲವನ್ನೂ ಉಲ್ಟಾ ಪಲ್ಟಾ ಮಾಡಲಾಗಿದೆ. ಈ ಬಗ್ಗೆ ಕೋರ್ಟ್‌ ಮೊರೆ ಹೋಗಲಾಗಿತ್ತು. ರಾಜ್ಯ ಸರ್ಕಾರ ಫಲಿತಾಂಶವನ್ನು ತಡೆಹಿಡಿದಿರುವುದು ಅಧಿಕಾರದ ದುರುಪಯೋಗವಾಗಿದೆ. ಚುನಾವಣಾಧಿಕಾರಿ ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಗುತ್ತಿಗೆದಾರನಿಗೆ ಮೋಸ ಉದ್ಯೋಗ ಕೊಡಿಸುವುದಾಗಿ ₹20 ಲಕ್ಷ ವಂಚನೆ

ಬಿಗ್ ಬಾಸ್‌ನ ರಜತ್ ರೀಲ್ಸ್‌ ಗೆ ಕರ್ನಾಟಕ ಸೇನಾಪಡೆ ಪ್ರತಿಭಟನೆ

24ಕ್ಕೆ ಮಂಡ್ಯ ನಗರದಲ್ಲಿ ಹಿಂದೂ ಸಮಾಜೋತ್ಸವ

Leave a Comment