NEWS

ಎಪಿಎಂಸಿ ಪರ ಸುಪ್ರೀಂ ಕೋರ್ಟ್ ತೀರ್ಪು

ಪಾಲನೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಮೆಗಾ ಕೃಷಿ ಮಾರುಕಟ್ಟೆ ಸ್ಥಾಪನೆಗೆ ಸರ್ವೋಚ್ಚ ನ್ಯಾಯಾಲಯ ಒಪ್ಪಿಗೆ ನೀಡಿದೆ ಎಂದು ಸಕ್ತರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಈ ಕುರಿತು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾನೂನು ಪ್ರಕ್ರಿಯೆಯಲ್ಲಿ ಎಪಿ ಎಂಸಿಗೆ ಜಯ ಸಿಕ್ಕಿದೆ. ಪ್ರಕರಣ 1994ರಿಂದ ಕೆಲವು ನ್ಯಾಯಾಲಯದಲ್ಲಿದ್ದವು. ಉಚ್ಚ ನ್ಯಾಯಾಲಯ, ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣಗಳಿದ್ದವು.

ಎರಡು ವರ್ಷ ಗಳಲ್ಲಿ ಎರಡು ಮಹತ್ತರ ಪ್ರಕರಣ ಗಳನ್ನು ಗೆದ್ದಿದ್ದೇವೆ ಎಂದರು. ಭೂ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಉಜ್ವಲ್ ಭುಯಾನ್ ಅವರಿದ್ದ ಪೀಠವು, ಉಚ್ಚ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು ಅರ್ಜಿಯನ್ನು ವಜಾಗೊಳಿಸಿತು ಎಂದು ಹೇಳಿದರು.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕಾಡ್ತಿಚ್ಚು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಿ : ಖಂಡ್ರೆ

ಡಿಜಿಟಲ್ ಮಾದರಿಯಲ್ಲಿ 2027ರ ಜನಗಣತಿ

ತೆರಿಗೆ ವಸೂಲಾತಿಯಲ್ಲಿ ಶೇಕಡ 100ರಷ್ಟು ಪ್ರಗತಿ ಸಾಧಿಸಿ: ಕೆ.ಆರ್ ನಂದಿನಿ

Leave a Comment