ಬೇಸಿಗೆಯಲ್ಲಿ ಕುಡಿಯುವ ನೀರು ವ್ಯತ್ಯವಾಗದಂತೆ ಅಗತ್ಯ ಕ್ರಮ ಮತ್ತು ಕೃಷಿ ಪಂಪ್ ಸೆಟ್ ಗಳಿಗೆ ನಿರಂತರ ವಿದ್ಯುತ್ ಸರಬರಾಜಿಗೆ ಕ್ರಮಕ್ಕೆ ಸೂಚನೆ
ಪಾಲನೆ ನ್ಯೂಸ್
ಮಂಡ್ಯ : ಮಂಡ್ಯ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸಭೆ ನಡೆಸಿ, ಬೇಸಿಗೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯುಂಟಾಗದಂತೆ ಅಗತ್ಯ ಕ್ರಮವಹಿಸುವಂತೆ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಹಾಗೂ ಕೃಷಿ ಪಂಪ್ ಸೆಟ್ ಗಳಿಗೆ 07 ಗಂಟೆಗಳ ಕಾಲ ಗುಣಮಟ್ಟದ ನಿರಂತರ ವಿದ್ಯುತ್ ಸರಬರಾಜು ಮಾಡಲು ಸಭೆಯಲ್ಲಿ ಸೂಚಿಸಲಾಯಿತು ಹಾಗೂ ಕೆಳಕಂಡ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಯಿತು.

- ಬೇಸಿಗೆ ಬೆಳೆಗೆ ತೊಂದರೆಯಾಗದಂತೆ ಕೃಷಿ ಪಂಪ್ ಸೆಟ್ ಗಳಿಗೆ 07 ಗಂಟೆಗಳ ಕಾಲ ಗುಣಮಟ್ಟದ ನಿರಂತರ ವಿದ್ಯುತ್ ಸರಬರಾಜು ಮಾಡಲು ಕ್ರಮವಹಿಸುವುದು.
- ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯುಂಟಾಗದಂತೆ ಅಗತ್ಯ ಕ್ರಮವಹಿಸುವುದು.
- ಕಾವೇರಿ ನದಿ ಮತ್ತು ಹೇಮಾವತಿ ನದಿಯ ಮೂಲಕ ಕುಡಿಯುವ ನೀರನ್ನು ಎತ್ತುವಳಿ ಮಾಡುವ ಹಿನ್ನೆಲೆಯಲ್ಲಿ ನದಿಯ ತೀರದಲ್ಲಿ ಅನಧಿಕೃತವಾಗಿ ಹಾಕಿಕೊಂಡಿರುವ ಅಕ್ರಮ ಪಂಪ್ ಸೆಟ್ ಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವುದು.
- ಕುಡಿಯುವ ನೀರಿನ ಯೋಜನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಪೂರೈಕೆ ಮಾಡುವಂತೆ ಮತ್ತು ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿಕೊಳ್ಳುವುದು.
- ಕುಡಿಯುವ ನೀರಿನ ಯೋಜನೆಯನ್ನು ಹೊರತುಪಡಿಸಿ, ಇತರೆ ಗ್ರಾಮಗಳಲ್ಲಿನ ಕೊಳವೆ ಬಾವಿಗಳು, ಪಂಪ್ ಸೆಟ್ ಗಳು ಮತ್ತು ಓವರ್ ಟ್ಯಾಂಕ್ ಗಳನ್ನು ನಿಯಮಿತವಾಗಿ ಪರಿಶೀಲಿಸಿ, ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮವಹಿಸುವುದು.
- ಈಗಾಗಲೇ ತಾಲ್ಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಯ ಕುರಿತು ಕಂಟ್ರೋಲ್ ರೂಂ ಗಳನ್ನು ಆರಂಭಿಸಿದ್ದು, ಸದರಿ ಕಂಟ್ರೋಲ್ ರೂಮ್ ಗಳು 24*7 ಸಮರ್ಥವಾಗಿ ಕರ್ತವ್ಯ ನಿರ್ವಹಣೆ ಮಾಡುವುದು.
- ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಲೋಡ್ ಮ್ಯಾನೇಜ್ಮೆಂಟ್ ವ್ಯವಸ್ಥೆಯನ್ನು ಸುಧಾರಿಸುವುದು.
- ಗ್ರಾಮೀಣ ಭಾಗಗಳಲ್ಲಿ ರೈತರಿಗೆ ನೀರಾವರಿಗೆ ಸಮಸ್ಯೆ ಉಂಟಾಗದಂತೆ ಸಂಬಂಧಿತ ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸುವುದು.
- ಬೇಸಿಗೆ ಅವಧಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಎಲ್ಲಾ ಇಲಾಖೆಗಳು ತಕ್ಷಣ ಸ್ಪಂದಿಸಿ, ತುರ್ತು ಕ್ರಮಗಳನ್ನು ಕೈಗೊಳ್ಳುವುದು.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
