NEWS

ಕಬ್ಬು ಬೆಳೆಗಾರರಿಗೆ ಅನುದಾನ ತಕ್ಷಣ ಬಿಡುಗಡೆಗೆ ಜಿಲ್ಲಾಧಿಕಾರಿ ಸೂಚನೆ

ಪಾಲನೆ ನ್ಯೂಸ್

ಮಂಡ್ಯ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ದೇಶನದಂತೆ, 2025–26ನೇ ಸಾಲಿನ ಹಂಗಾಮಿನಲ್ಲಿ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ತಕ್ಷಣವೇ ಪಾವತಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಸೂಚಿಸಿದರು.

  1. ರಾಜ್ಯ ಸರ್ಕಾರವು ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಮೆಟ್ರಿಕ್ ಟನ್ಗೆ ರೂ.50/- ಹಾಗೂ ಸಕ್ಕರೆ ಕಾರ್ಖಾನೆಗಳಿಂದ ರೂ.50/- ಹೆಚ್ಚುವರಿ ಬೆಲೆ ನೀಡುವಂತೆ ಆದೇಶಿಸಿದ್ದು, ಸರ್ಕಾರದ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
  2. ಸರ್ಕಾರದ ಆದೇಶದ ವಿರುದ್ಧ ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳು ಮಾನ್ಯ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆ, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಕಾರ್ಖಾನೆಗಳ ಪಾಲಿನ ರೂ.50/- ಅನ್ನು ಕಾಯ್ದಿರಿಸಲು ಸೂಚಿಸಲಾಗಿದೆ.
  3. ಸರ್ಕಾರದ ಪಾಲಿನ ರೂ.50/- ಅನುದಾನವನ್ನು ಸಂಬಂಧಿತ ಜಿಲ್ಲಾಧಿಕಾರಿಗಳಿಂದ ಪಡೆದು, ಸಕ್ಕರೆ ಕಾರ್ಖಾನೆಗಳು ತಮ್ಮ ಮೂಲಕವೇ ರೈತರಿಗೆ ತಕ್ಷಣವೇ ಪಾವತಿಸುವಂತೆ ಮಾನ್ಯ ಆಯುಕ್ತರು, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರು ದಿನಾಂಕ 04-05-2026ರಂದು ನಿರ್ದೇಶನ ನೀಡಿರುತ್ತಾರೆ.
  4. ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದ ಪಾಲಿನ ರೂ.50/- ಸಹಾಯಧನವನ್ನು ಯಾವುದೇ ವಿಳಂಬವಿಲ್ಲದೆ ಕಬ್ಬು ಸರಬರಾಜು ಮಾಡಿದ ರೈತರಿಗೆ ತಕ್ಷಣ ಪಾವತಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
  5. ಅಂತಿಮವಾಗಿ, ರೈತರ ಹಿತಾಸಕ್ತಿಯನ್ನು ಪ್ರಮುಖವಾಗಿ ಪರಿಗಣಿಸಿ, ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ತಕ್ಷಣವೇ ರೈತರಿಗೆ ಪಾವತಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಮತ್ತೊಮ್ಮೆ ಸೂಚಿಸಿದರು.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮೊಜಬಾ ಖಮೇನಿ ಕೂಡ ಇದೀಗ ಜೀವಂತ ಶವವಾಗಿದ್ದಾರೆ

ನಕಲಿ ಗನ್ ಇಟ್ಟು ಕೊಂಡು ಪ್ರಾಂಕ್ ಮಾಡಿದವನು ಪೊಲೀಸರ ಅತಿಥಿಯಾಗಿದ್ದಾನೆ

ಗರ್ಭಕಂಠ ಕ್ಯಾನ್ಸರ್ ತಡೆಗೆ ಉಚಿತ ವ್ಯಾಕ್ಸಿನ್  ಅಭಿನಂದನಾರ್ಹ

Leave a Comment