ಪಾಲನೆ ನ್ಯೂಸ್
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ಸೋಲು ಕಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ.
ಜನಾದೇಶವನ್ನು ತಳ್ಳಿಹಾಕಿದಂತೆ ಮಮತಾ ಬ್ಯಾರ್ಜಿಯವರು ಹೇಳಿಕೆ ನೀಡುತ್ತಿದ್ದು, ರಾಜಕೀಯ ಪಕ್ಷಗಳ ಆಕ್ರೋಶ ಕಾರಣವಾಗಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಹಿರಿಯ ವಕೀಲ ಮತ್ತು ರಾಜಕೀಯ ವಿಶ್ಲೇಷಕ ಮಹೇಶ್ ಜೇಠ್ಮಲಾನಿ ಅವರು, ಒದ್ದು ಹೊರಹಾಕಿ ಹೊರಹಾಕಿ ಎಂದು ತೀವ್ರವಾಗಿ ಕಿಡಿಕಾರಿದ್ದಾರೆ. ಈ ವಿಚಾರದಲ್ಲಿ ಗವರ್ನರ್ ಹಸ್ತಕ್ಷೇಪ ಅಗತ್ಯವಿದೆ. ಜನರು ನೀಡಿದ ತೀರ್ಪನ್ನು ಒಪ್ಪಿಕೊಳ್ಳದೇ ಅಧಿಕಾರದಲ್ಲೇ ಮುಂದುವರಿಯಲು ಪ್ರಯತ್ನಿಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಪಕ್ಷವು ಈ ಬಾರಿ ನಿರೀಕ್ಷಿತ ಫಲಿತಾಂಶವನ್ನು ಪಡೆಯಲು ವಿಫಲವಾಗಿದ್ದು, ಭಾರತೀಯ ಜನತಾ ಪಕ್ಷದ ಭಾರೀ ಮುನ್ನಡೆ ಸಾಧಿಸಿ ಸರ್ಕಾರ ರಚನೆಗೆ ಸಜ್ಜಾಗಿದೆ. ಆದರೆ, ಮಮತಾ ಬ್ಯಾನರ್ಜಿ ಅವರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ “ನಾನು ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
