ಪಾಲನೆ ನ್ಯೂಸ್
ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಹೈಡೋಪೋನಿಕ್ ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಹೈಡೋಪೋನಿಕ್ಗಾಂಜಾ ಸಾಗಿಸುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು, ಒಟ್ಟು4 ಕೋಟಿರೂ. ಮೌಲ್ಯದಗಾಂಜಾಜಪ್ತಿ ಮಾಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ ಮೂವರು ಪ್ರಯಾಣಿಕರನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇವರಿಂದ 4 ಕೋಟಿ ರೂ. ಮೌಲ್ಯದ 12.96 ಕೆಜಿ ಹೈಡೋಪೋನಿಕ್ ಗಾಂಜಾ ಜಪ್ತಿ ಮಾಡಲಾಗಿದೆ.
ಬ್ಯಾಂಕಾಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೂವರು ಪ್ರಯಾಣಿಕರನ್ನು ಶಂಕೆಯ ಮೇಲೆ ತಪಾಸಣೆ ನಡೆಸಿದಾಗ ಈ ದಂಧೆ ಬೆಳಕಿಗೆ ಬಂದಿದೆ. ಆರೋಪಿಗಳು ತಮ್ಮ ಚೆಕ್-ಇನ್ ಬ್ಯಾಗೇಜ್‌ಗಳಲ್ಲಿ ಅತ್ಯಂತ ಚಾಣಾಕ್ಷತನದಿಂದ ಗಾಂಜಾವನ್ನು ಅಡಗಿಸಿಟ್ಟು ಸಾಗಿಸುತ್ತಿದ್ದರು.

ಇವರ ಚಾಣಾಕ್ಷತನ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನೆಲಕಚ್ಚಿದೆ.ಬಂಧಿತರ ಮೇಲೆ ಮಾದಕ ದ್ರವ್ಯ ವಿರೋಧಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ಬ್ಯಾಂಕಾಕ್ ಮಾರ್ಗವಾಗಿ ಬೆಂಗಳೂರಿಗೆ ಹೈಡೋಪೋನಿಕ್ ಗಾಂಜಾ ಸರಬರಾಜು ಮಾಡುವ ಜಾಲ ಸಕ್ರಿಯವಾಗಿದ್ದು, ಅಧಿಕಾರಿಗಳು ಕಣ್ಣಾವಲು ಬಿಗಿಗೊಳಿಸಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
