ಪಾಲನೆ ನ್ಯೂಸ್
ಮೈಸೂರು: ಆಶಾ ಕಾರ್ಯಕರ್ತೆಯರಿಗೆ ನೀಡಬೇಕಾದ ಮಾಸಿಕ ಗೌರವಧನ, ಪ್ರೋತ್ಸಾಹಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾ ಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಹಾಗೂ ಎಐಯುಟಿಯುಸಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಆಶಾ ಕಾರ್ಯಕರ್ತೆಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಳೆದ ಒಂದು ವರ್ಷದಿಂದ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ, ಪ್ರೋತ್ಸಾಹಧನ ದೊರಕುತ್ತಿಲ್ಲ. 3 ರಿಂದ 4 ತಿಂಗಳ ಕೇಂದ್ರದ ಪ್ರೋತ್ಸಾಹಧನ ಬಾಕಿ ಇದೆ. 1ರಿಂದ 2 ತಿಂಗಳ ಗೌರವಧನ ಬಾಕಿ ಇದೆ. ಪ್ರತೀ ತಿಂಗಳು ವೇತನ ನಿಗದಿತವಾಗಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದಿಂದ ಆಶಾ ಕಾರ್ಯ ಕರ್ತೆಯರಿಗೆ ಕೆಲಸಕ್ಕೆ ತಕ್ಕ ಪ್ರೋತ್ಸಾಹಧನ ಸಿಗುತ್ತಿಲ್ಲ.

ಹಲವಾರು ವರ್ಷಗಳಿಂದ ಬಾಕಿ ಇರುವ ವಿವಿಧ ಕಾಂಪೋನೆಂಟ್‌ಗಳ ಹಣ ಬಿಡುಗಡೆ ಆಗಿಲ್ಲ. ಜಿಲ್ಲಾ, ತಾಲ್ಲೂಕು ಹಂತದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಕೇಳಿದರೆ, ಇದು ರಾಜ್ಯದ ಸಮಸ್ಯೆ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸಿದರು. ಏ.24ರಿಂದ 9 ವಿವಿಧ ಸೇವೆಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಲಾಗಿದೆ. ಇದರಿಂದ ಕಾರ್ಯಕರ್ತೆಯರು ಸಂಕಷ್ಟದಲ್ಲಿದ್ದು, ಪ್ರತಿ ಕಾರ್ಯಕರ್ತೆಯರಿಗೂ 500 ರಿಂದ 1000 ರೂ. ವರೆಗೆ ಪ್ರೋತ್ಸಾಹಧನ ಕಡಿತವಾಗಲಿದೆ ಎಂದು ಅಳಲು ತೋಡಿಕೊಂಡರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
