NEWS

ಗುಜರಾತ್ ನ ಅಹಮದಾಬಾದ್‌ನಲ್ಲಿ ಐಪಿಎಲ್ 2026ರ ಫೈನಲ್ ಪಂದ್ಯ

ಪಾಲನೆ ನ್ಯೂಸ್

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ 2026ರ ಫೈನಲ್ ಪಂದ್ಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುಜರಾತ್ ನ ಅಹಮದಾಬಾದ್‌ಗೆ ಸ್ಥಳಾಂತರಿಸಿದೆ.ಹಾಲಿ ಸಾಮಾನ್ಯವಾಗಿ ಚಾಂಪಿಯನ್‌ಗಳ ತವರು ಮೈದಾನದಲ್ಲಿ ಫೈನಲ್ ಪಂದ್ಯ ಆಯೋಜಿಸುವುದು ಸಂಪ್ರದಾಯವಾಗಿದೆ.

ಹಾಗಾಗಿ ಆರ್‌ಸಿಬಿ ತಂಡದ ತವರು ಮೈದಾನವಾದ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ಆಯೋಜನೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಕಡಿಮೆ ಆಸನಗಳು, ಕಳೆದ ವರ್ಷ ನಡೆದಿದ್ದ ಕಾಲ್ತುಳಿತ ಮತ್ತು ಶಾಸಕರ ಟಿಕೆಟ್ ವಿವಾದ ಮುಂತಾದ ಕಾರಣಗಳಿಂದ ಈ ಬಾರಿಯ ಫೈನಲ್ ಪಂದ್ಯ ಮತ್ತೆ ಮೋದಿ ಮೈದಾನದ ಪಾಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಮೇ 31ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾ‌ರ್ ಅವರು, ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅದು ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರ ಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಆರ್. ವೈಶಾಲಿ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಮಹಿಳಾ ವಿಭಾಗದಲ್ಲಿ ಚಾಂಪಿಯನ್

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ – ಎನ್.ಚಲುವರಾಯಸ್ವಾಮಿ

ಜ.9 ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆ-2025 ಆಹಾರ ಸುರಕ್ಷತೆ ಮತ್ತು ಕಾನೂನು ಅರಿವು ಕಾರ್ಯಕ್ರಮ:

Leave a Comment