ಪಾಲನೆ ನ್ಯೂಸ್
ನವದೆಹಲಿ: ಬಹುರಾಷ್ಟ್ರಗಳು ಪಾಲ್ಗೊಳ್ಳುವ ಕ್ರೀಡಾಕೂಟಗಳಲ್ಲಿ ಮಾತ್ರ ಪಾಕಿಸ್ತಾನದ ವಿರುದ್ಧ ಆಡಲು ವಿನಾಯಿತಿ ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವಾಲಯ ಬುಧವಾರ ಪುನರುಚ್ಚರಿಸಿದೆ. ಈ ಮೂಲಕ ಕಳೆದ ವರ್ಷ ಪಾಕ್ ಮೇಲೆ ಹೇರಿದ್ದ ಕ್ರೀಡಾ ಸಂಬಂಧಗಳ ನಿರ್ಬಂಧ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದೆ. ಕ್ರೀಡಾಪಟುಗಳು, ತಂಟ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಆಡಳಿತಾಧಿಕಾರಿಗಳ ವೀಸಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಚಿವಾಲಯ ಈ ಸ್ಪಷ್ಟನೆ ನೀಡಿದೆ.
ದ್ವಿಪಕ್ಷೀಯ ಸರಣಿಗಳಿಗಾಗಿ ಪಾಕಿಸ್ತಾನಕ್ಕೆ ಭಾರತದ ತಂಡಗಳು ಹೋಗುವಂತಿಲ್ಲ ಮತ್ತು ಪಾಕಿಸ್ತಾನದ ತಂಡಗಳು ಭಾರತಕ್ಕೆ ಬಂದು ಆಡುವಂತಿಲ್ಲ. ಆದರೆ ಭಾರತ ಅಥವಾ ವಿದೇಶದಲ್ಲಿ ಬಹುರಾಷ್ಟ್ರಗಳ ಕ್ರೀಡಾಕೂಟಕ್ಕೆ ವಿನಾಯಿತಿ ಕ್ರೀಡಾ ಸಚಿವಾಲಯ ಪುನರುಚ್ಚಾರ
ನಡೆಯುವ ಬಹು ರಾಷ್ಟ್ರಗಳ ಅಂತಾರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪಾಕ್ ತಂಡ ಅಥವಾ ಕ್ರೀಡಾಪಟುಗಳ ವಿರುದ್ಧ ಸ್ಪರ್ಧಿಸಬಹುದು. ಭಾರತದಲ್ಲಿ ನಡೆಯುವ ಬಹುರಾಷ್ಟ್ರಗಳ ಕ್ರೀಡಾಕೂಟಗಳಲ್ಲಿ ಪಾಕ್ ತಂಡ ಅಥವಾ ಕ್ರೀಡಾಪಟುಗಳೂ ಭಾಗವಹಿಸಬಹುದು.

ಆದರೆ ಪಾಕಿಸ್ತಾನದಲ್ಲಿ ನಡೆಯುವ ಬಹುರಾಷ್ಟ್ರಗಳ ಕ್ರೀಡಾಕೂಟದಲ್ಲೂ ಭಾರತೀಯರು ಭಾಗವಹಿಸುವುದಕ್ಕೆ ನಿರ್ಬಂಧವಿದೆ ಎಂದು ಕ್ರೀಡಾ ಸಚಿವಾಲಯವು ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್), ಭಾರತೀಯ ಒಲಿಂಪಿಕ್ಸ್ ಸಂಸ್ಥೆ (ಐಒಎ) ಮತ್ತು ರಾಷ್ಟ್ರೀಯ ಕ್ರೀಡಾ ಒಕ್ಕೂಟ ಗಳಿಗೆ ಕಳುಹಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಪಾಕಿಸ್ತಾನದ ಜತೆಗಿನ ಕ್ರೀಡಾ ಸಂಬಂಧದ ಪಾಲಿಸಿಯನ್ನು ಕಳೆದ ವರ್ಷ ಆಗಸ್ಟ್‌ನಲ್ಲಿ ಸರ್ಕಾರ ಮೊದಲ ಬಾರಿಗೆ ಪ್ರಕಟಿಸಿತ್ತು. ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಆಡುವುದಕ್ಕೆ ಸಂಬಂಧಿಸಿ ಸರ್ಕಾರ ಈ ಸ್ಪಷ್ಟನೆ ನೀಡಿತ್ತು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
