NEWS

ಕಳೆದ ಮೂರು ವರ್ಷಗಳಲ್ಲಿ 3 ಸಾವಿರ ರೈತರು ಆತ್ಮಹತ್ಯೆ : ನಿಖಿಲ್ ಕುಮಾರಸ್ವಾಮಿ

ಪಾಲನೆ ನ್ಯೂಸ್

ಪಾಂಡವಪುರ: ಕಾಂಗ್ರೆಸ್ ಆಡಳಿತದಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಮಂಡ್ಯ ಜಿಲ್ಲೆಯೊಂದರಲ್ಲೇ 97 ರೈತರು ಬಲಿಯಾಗಿದ್ದಾರೆ. ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದು ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವ ಪುರದಲ್ಲಿ ಮಂಗಳವಾರ ನಡೆದ ಜನರೊಂದಿಗೆ ಜನತಾದಳ ಮತ್ತು ಪಕ್ಷದ 25ನೇ ವರ್ಷದ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರೈತರ ಬದುಕು ಹಸನಾಗಿಸುತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸರ್ಕಾರದ ಆಡಳಿತದಲ್ಲಿ ಇಂದು ಅನ್ನದಾತನ ಬದುಕೇ ಹಸಿಗೆಯಾಗುತ್ತಿದೆ. ಸಾಲದ ಸುಳಿಗೆ ಸಿಲುಕಿ, ಬೆಂಬಲ ಬೆಲೆಯಿಲ್ಲದೆ, ನೆಮ್ಮದಿಯಿಂದ ಬದುಕಲೂ ಆಗದ ಸ್ಥಿತಿಗೆ ರೈತ ತಲುಪಿದ್ದಾನೆ ಎಂದರು. ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ಡಿ.ಸಿ. ತಮ್ಮಣ್ಣ ಮುಂತಾದವರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಲೆಮಹದೇಶ್ವರ ಬೆಟ್ಟದಲ್ಲಿ ಬಸ್‌ಗಳ ಮುಖಾಮುಖಿ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಭೂ ವ್ಯಾಜ್ಯ ಪ್ರಕರಣದಲ್ಲಿ ಮೈಸೂರು ಡಿಸಿ ವಿರುದ್ಧ ಅರೆಸ್ಟ್ ವಾರೆಂಟ್

ಚಿರತೆ ದಾಳಿಯಿಂದ ಮೃತಪಟ್ಟ ಯುವಕನ ನಿವಾಸಕ್ಕೆ ಮಾಜಿ ಶಾಸಕ: ರವೀಂದ್ರ ಶ್ರೀಕಂಠಯ್ಯ ಭೇಟಿ

Leave a Comment