NEWS

ಮಾಡು ಇಲ್ಲವೆ ಮಡಿ ಪಂದ್ಯಕ್ಕೆ ಸಜ್ಜಾದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್

ಪಾಲನೆ ನ್ಯೂಸ್

ನವದೆಹಲಿ: ಐಪಿಎಲ್‌ನಲ್ಲಿ ಶುಕ್ರವಾರ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ನಡುವೆ ಮಾಡು ಇಲ್ಲವೇ ಮಡಿ ಪಂದ್ಯ ನಡೆಯಲಿದೆ. ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಲು 2 ತಂಡಕ್ಕೂ ಗೆಲುವು ಅಗತ್ಯ. ಡೆಲ್ಲಿ ತಂಡ ಆಡಿರುವ 10 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿದೆ. ತಂಡ ಕೊನೆ 5 ಪಂದ್ಯಗಳ ಪೈಕಿ 4ರಲ್ಲಿ ಪರಾಭವಗೊಂಡಿದೆ. ಅಲ್ಲದೆ, ತನ್ನ ತವರು ಕ್ರೀಡಾಂಗಣದಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಮಾತ್ರ ಜಯಗಳಿಸಿದೆ.

ಹೀಗಾಗಿ ಕೆಕೆಆರ್ ವಿರುದ್ಧ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬ ಕುತೂಹಲವಿದೆ. ಮತ್ತೊಂದೆಡೆ 3 ಬಾರಿ ಚಾಂಪಿಯನ್‌ ಕೋಲ್ಕತಾ ತಂಡ 9 ಪಂದ್ಯಗಳನ್ನಾಡಿದ್ದು, 3ರಲ್ಲಿ ಗೆದ್ದು ಒಟ್ಟು 7 ಅಂಕ ಪಡೆದುಕೊಂಡಿದೆ. ತಂಡ ಪ್ಲೇ-ಆಫ್ ರೇಸ್‌ನಲ್ಲಿ ಉಳಿದುಕೊಳ್ಳಬೇಕಿದ್ದರೆ ಎಲ್ಲಾ 5 ಪಂದ್ಯಗಳಲ್ಲೂ ಗೆಲ್ಲಬೇಕು. ಆರಂಭಿಕ 6 ಪಂದ್ಯಗಳಲ್ಲೂ ಗೆಲುವಿನಿಂದ ವಂಚಿತವಾಗಿದ್ದ ತಂಡ ತನ್ನ ಕೊನೆ 3 ಪಂದ್ಯಗಳಲ್ಲೂ ಜಯಗಳಿಸಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಒಂದು ತಿಂಗಳ ಅಭಿಯಾನ – ಜಿ.ಪಂ.ಸಿಇಒ ಕೆ.ಆರ್.ನಂದಿನಿ.

ಇರಾನ್‌ನ ನಾಯಕ ಅಯತ್ತೊಲ್ಲಾ ಅಲಿ ಖಮೇನಿ ಸಾವಿಗೆ ಭಾರತ ಸಂತಾಪ

ಆಧಾ‌ರ್ ಬದಲು ಸ್ಮಾರ್ಟ್‌ ಕಾರ್ಡ್

Leave a Comment