ಪಾಲನೆ ನ್ಯೂಸ್
ಬೆಂಗಳೂರು: ನೈಋತ್ಯ ರೈಲ್ವೆ ಇಲಾಖೆಯ ಬಡ್ತಿ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲೂ ನಡೆಸುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಸ್ತುತ ಬಡ್ತಿ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸಲಾಗುತ್ತಿದೆ.

ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಕರ್ನಾಟಕದ ಬಹುಭಾಗ ಬರುವುದರಿಂದ ಇಲ್ಲಿನ ಉದ್ಯೋಗಿಗಳಿಗೆ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದರೆ ಹೆಚ್ಚು ಅನುಕೂಲವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2024ರ ಆಗಸ್ಟ್‌ನಲ್ಲಿ ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ, ಎಲ್ಲ ರೈಲ್ವೆ ವಲಯಗಳಲ್ಲಿ ಇಲಾಖಾ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ಜತೆಗೆ ಪ್ರಾದೇಶಿಕ ಭಾಷೆಗಳಲ್ಲೂ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಆದೇಶದ ಅನುಸಾರ ನೈಋತ್ಯ ರೈಲ್ವೆಯಲ್ಲೂ ಕನ್ನಡದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
