NEWS

ಭೂ ವ್ಯಾಜ್ಯ ಪ್ರಕರಣದಲ್ಲಿ ಮೈಸೂರು ಡಿಸಿ ವಿರುದ್ಧ ಅರೆಸ್ಟ್ ವಾರೆಂಟ್

ಪಾಲನೆ ನ್ಯೂಸ್

ಮೈಸೂರು: ಭೂ ವ್ಯಾಜ್ಯ ಪ್ರಕರಣದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆ ಮೈಸೂರು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ವಿರುದ್ಧ ಬಂಧನ ವಾರಂಟ್ ಜಾರಿಗೊಂಡಿದೆ. ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯ ಈ ಆದೇಶ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆ ಯನ್ನು ಏ.24ಕ್ಕೆ ಮುಂದೂಡಲಾಗಿದೆ.

ಕುಂಬಾರಕೊಪ್ಪಲು ನಿವಾಸಿ ಜಯರಾಮು ಅವರ ಜಮೀನು ಸಂಬಂಧ ನ್ಯಾಯಾಲಯ ನೀಡಿದ್ದ ತೀರ್ಪನ್ನು ಜಿಲ್ಲಾಡಳಿತ ಜಾರಿಗೊಳಿಸದ ಹಿನ್ನೆಲೆ, ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಆದೇಶ ಪಾಲನೆ ಆಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದೆ.


ಪ್ರಕರಣದ ಹಿನ್ನೆಲೆ: ಹೆಬ್ಬಾಳು ಗ್ರಾಮದ ಸರ್ವೆ ನಂ. 155 ಮತ್ತು 159/1ರಲ್ಲಿ ಇರುವ ಸುಮಾರು ಐದು ಎಕರೆ ಜಮೀನನ್ನು 1980ರಲ್ಲಿ ನಗರ ಭೂ ಕಾಯ್ದೆಯಡಿ ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿತ್ತು. ಈ ಕ್ರಮ ಪ್ರಶ್ನಿಸಿ ಮೂಲ ಮಾಲೀಕರಾದ ಸೀತಾರಾಮೇಗೌಡ ಅವರ ಪುತ್ರ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ನ್ಯಾಯಾಲಯದ ಮೊರೆ ಹೋಗಿದ್ದರು.


ಕೆಳ ನ್ಯಾಯಾಲಯ ಹಾಗೂ ಮೇಲ್ಮನವಿ ನ್ಯಾಯಾಲಯ ಎರಡೂ ಅರ್ಜಿದಾರರ ಪರ ತೀರ್ಪು ನೀಡಿದ್ದರೂ, ಜಮೀನು ಹಸ್ತಾಂತರಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತ ಭೂ ಮಾಲೀಕರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ನ್ಯಾಯಾಲಯ ಕಠಿಣ ನಿಲುವು ತಾಳಿದೆ.
ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದೆ ಎಂಬ ಮಾಹಿತಿ ಲಭ್ಯವಿಲ್ಲ. ಮಾಧ್ಯಮಗಳ ಮೂಲಕವೇ ತಿಳಿದುಬಂದಿದೆ. ಪರಿಶೀಲಿಸಿ ನ್ಯಾಯಾಲಯದ ಆದೇಶ ದಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn


Related posts

ಜ.25 ರಂದು ಅಂತಾರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ -ಡಾ. ಕುಮಾರ

ಗೃಹ ಲಕ್ಷ್ಮಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಸೀಡಿಂಗ್ ಮತ್ತು ಇ-ಕೆ.ವೈ.ಸಿ ಮಾಡಿಸಿ

ಯುವ ನಿಧಿ ಯೋಜನೆಯ ನೋಂದಣಿ ಕಾರ್ಯಕ್ರಮ

Leave a Comment