NEWS

ರೈತರ ಕೃಷಿ ಕಾರ್ಯಗಳಿಗೆ ಕೊರತೆ ಉಂಟಾಗದಂತೆ ನೀರಿನ ಪೂರೈಕೆ ಮಾಡಿ

ಗೃಹಬಳಕೆ ಅನಿಲ ಪೆಟ್ರೋಲ್ ಡೀಸೆಲ್ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ : ಹೆಚ್ ಡಿ ಕುಮಾರಸ್ವಾಮಿ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಗೃಹ ಬಳಕೆಗೆ ನಿತ್ಯ 10,800 ಸಿಲಿಂಡರ್ ಅಗತ್ಯವಿದ್ದು ಬೇಡಿಕೆಗೆ ತಕ್ಕಂತೆ ಅನಿಲ ದಾಸ್ತಾನು ಲಭ್ಯವಿದೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಮಂಡ್ಯ ಲೋಕಸಭಾ ಸಂಸದರಾದ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 15 ಲಕ್ಷಕ್ಕೂ ಹೆಚ್ಚು ಲೀಟರ್ ಡೀಸೆಲ್ ಮತ್ತು 12 ಲಕ್ಷಕ್ಕೂ ಹೆಚ್ಚಿನ ಪೆಟ್ರೋಲ್ ಲಭ್ಯವಿದೆ. ಸಾರ್ವಜನಿಕರು ಆತಂಕ್ಕೊಳಗಾಗಿ ಕ್ಯಾನ್ ಗಳ ಮೂಲಕ ಪೆಟ್ರೋಲ್ ಡೀಸೆಲ್ ಸಾಗಿಸುವುದರಿಂದ ಅಪಾಯದ ಸಂಭವ ಹೆಚ್ಚು ಇದ್ದು ಸಾರ್ವಜನಿಕರ ಹಿತದೃಷ್ಟಿಯಿಂದ ಈಗಾಗಲೇ ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್ ಗಳಿಗೂ ಕ್ಯಾನ್ ಗಳಿಗೆ ಪೆಟ್ರೋಲ್ ಡೀಸೆಲ್ ತುಂಬಿಸದಂತೆ ಸೂಚನೆ ನೀಡಲಾಗಿದೆ ಎಂದರು.

ಇನ್ನೂ ವಾಣಿಜ್ಯ ಬಳಕೆಯ ಅನಿಲ ಪೂರೈಕೆಯಲ್ಲಿ ದಾಸ್ತಾನು ಕಡಿಮೆ ಇದ್ದು ಶಾಲೆ, ವಸತಿ ಶಾಲೆ, ಆಸ್ಪತ್ರೆಗಳಿಗೆ ಪ್ರಾಮುಖ್ಯತೆ ಆಧಾರದ ಮೇಲೆ ಅನಿಲ ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ ರೈತರು ಬೆಳೆದಿರುವ ಬೆಳೆಗಳಿಗೆ ಅಗತ್ಯ ನೀರಿನ ಪೂರೈಕೆ ಮಾಡಿ. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿಗೆ ಜಿಲ್ಲೆಯ 38,517 ಜನರು ಅರ್ಜಿ ಸಲ್ಲಿಸಿದ್ದು ವೈದ್ಯಕೀಯ ಮಂಡಳಿಯಿಂದ 29,264 ಜನರಿಗೆ ಯು.ಡಿ.ಐ.ಡಿ ಕಾರ್ಡ್ ವಿತರಣೆ ಮಾಡಲಾಗಿದೆ. ತಿರಸ್ಕರಿಸಿದ ಅರ್ಜಿಗಳನ್ನು ಪುನಃ ಕೂಲಂಕಷವಾಗಿ ಪರಿಶೀಲಿಸಿ ಅರ್ಹರಿಗೆ ಯು.ಡಿ.ಐ.ಡಿ ಕಾರ್ಡ್ ವಿತರಣೆ ಮಾಡಿ ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 17 ಲಕ್ಷದ 20 ಸಾವಿರಕ್ಕೂ ಹೆಚ್ಚು ಕಾರ್ಡ್ ಗಳನ್ನು ವಿತರಣೆ ಮಾಡಲಾಗಿದೆ. ಜಿಲ್ಲೆಯ 347 ರೈತ ಉದ್ದಿಮೆದಾರರಿಗೆ ಪಿ.ಎಂ.ಎಫ್.ಎಂ.ಇ ಯೋಜನೆಯಡಿ ಒಟ್ಟು ರೂ 87.65 ಕೋಟಿ ಸಾಲ ನೀಡಲಾಗಿದ್ದು. ರೂ 29.33 ಕೋಟಿ ಸಹಾಯಧನವನ್ನು ವಿತರಿಸಲಾಗಿದೆ ಎಂದು ಹೇಳಿದರು.

ಇ ಶ್ರಮ್ ಯೋಜನೆಯಡಿ ಜಿಲ್ಲೆಯಲ್ಲಿ 5,59,543 ನೋಂದಣಿಯಾಗಿರುತ್ತಾರೆ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಶೇಕಡಾ 155.33 ರಷ್ಟು ಪ್ರಗತಿ ಸಾಧಿಸಲಾಗಿದೆ.ಸರ್ಕಾರದ ಯೋಜನೆಗಳನ್ನು ಕುರಿತು ಗ್ರಾಮ ಮತ್ತು ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಗ್ರಾಮ ಹೋಬಳಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕೇವಲ ಕಚೇರಿಯಲ್ಲಿ ಕುಳಿತು ಕೆಲಸ ಮಾಡಬೇಡಿ. ವಾರದಲ್ಲಿ ಒಂದು ದಿನವಾದರೂ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆಗ ಮಾತ್ರ ಗ್ರೌಂಡ್ ರಿಯಾಲಿಟಿ ಕುರಿತು ತಿಳಿಯುತ್ತದೆ.

ಆರ್ಥಿಕವಾಗಿ ಹಿಂದುಳಿದ ಸಾರ್ವಜನಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳನ್ನು ರೂಪಿಸಿದೆ. ಅಂದ್ರೆ ಅದರ ಪ್ರಗತಿಯಲ್ಲಿ ನಾವು ಹಿಂದುಳಿದಿದ್ದೇವೆ. ಸರ್ಕಾರದ ಕಾರ್ಯಕ್ರಮವನ್ನು ಉದ್ದಿಮೆಯಾಗಿ ಪರಿವರ್ತಿಸಿ ಜಿಲ್ಲೆಯ ನಿರುದ್ಯೋಗ ಮಟ್ಟ ಕಡಿಮೆ ಮಾಡಿ. ಸರ್ಕಾರದ ಯೋಜನೆಗಳ ಸಾರ್ವಜನಿಕರಿಗೆ ತಲುಪಬೇಕು.

ಜಿಲ್ಲೆಯನ್ನು ಕೈಗಾರಿಕೆ ತರಲು ಅನೇಕ ಶ್ರಮ ವಹಿಸುತ್ತಿದ್ದೇನೆ ಅಧಿಕಾರಿಗಳು ಇದಕ್ಕೆ ಪೂರಕವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ. ಕುಡಿಯುವ ನೀರಿನ ವ್ಯವಸ್ಥೆ ಉಂಟಾಗದಂತೆ ಕ್ರಮ ವಹಿಸಿ. ಮಟ್ಕ ಮತ್ತು ಕ್ರೀಕೆಟ್ ಜೂಜುಕೋರರ ವಿರುದ್ಧ ಕ್ರಮ ವಹಿಸಿ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಲು ಜೂನ್ ಮಾಹೆಯವರೆಗೆ ಜಿಲ್ಲೆಯ ಜನತೆಗೆ ಪ್ರತಿ ಮಾಹೆ 2 ಟಿ.ಎಂ.ಸಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಸೂಕ್ತ ಕ್ರಮ ವಹಿಸಲಾಗಿದೆ. ಜನ ಮತ್ತು ಜಾನುವಾರುಗಳಿಗೆ ತೊಂದರೆ ಉಂಟಾಗದಂತೆ ನೀರು ಪೂರೈಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಬೇಸಿಗೆ ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳ ಪಟ್ಟಿ ತಯಾರಿಸಲಾಗಿದೆ. ಸಮಸ್ಯೆ ಉಂಟಾಗುವ ಗ್ರಾಮಗಳಿಗೆ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಕೆ ಮಾಡಲು ಕ್ರಮ ವಹಿಸಲಾಗಿದ್ದು ಸದ್ಯಕ್ಕೆ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದಿಲ್ಲ ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ 15 ಫೂಟ್ ಓವರ್ ಬ್ರಿಡ್ಜ್ ಮಾಡಲು ಅನುಮತಿ ನೀಡಲಾಗಿದೆ ಈಗಾಗಲೇ 7 ಫೂಟ್ ಓವರ್ ಬ್ರಿಡ್ಜ್ ಮಾಡಲಾಗಿದ್ದು ಬಾಕಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಕೆ.ಆರ್ ಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್ ಟಿ ಮಂಜು, ಮಾಜಿ ಶಾಸಕ ಪುಟ್ಟರಾಜು, ಮಾಜಿ ಸಚಿವ ಹಾಗೂ ನಗರಾಭಿವೃದ್ಧಿ ಸಮಿತಿಯ ನಾಮ ನಿರ್ದೇಶನ ಸದಸ್ಯರಾದ ಡಿ.ಸಿ ತಮ್ಮಣ್ಣ, ದಿಶಾ ಸಮಿತಿ ಸದಸ್ಯರು ಹಾಗೂ ಮಾಜಿ ಶಾಸಕ ಕೆ ಅಂದಾನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ವಿ, ಜೆ ಶೋಭಾರಾಣಿ ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಸೇರಿದಂತೆ ದಿಶಾ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ: ಡಾ. ಮಾನಸ

ಫೆ.2ರಂದು ಎಂ.ಶ್ರೀನಿವಾಸ್ ಅಭಿನಂದನಾ ಗ್ರಂಥ ಬಿಡುಗಡೆ, ಪ್ರಶಸ್ತಿ ಪ್ರದಾನ ಸಮಾರಂಭ

cj roy: ಅಚ್ಚರಿ ವ್ಯಕ್ತಿಯನ್ನ ಸಿ ಜೆ ರಾಯ್‌ ಉತ್ತರಾಧಿಕಾರಿಯನ್ನಾಗಿ ಘೋಷಿಸಿದ ಕಾನ್ಫಿಡೆಂಟ್‌ ಗ್ರೂಪ್‌

Leave a Comment