Uncategorized

ಕೊಡವ ಶೈಲಿಯ ಸೀರೆಯಲ್ಲಿ ಮಿಂಚಿದ ರಶ್ಮಿಕಾ

ಪಾಲನೆ ನ್ಯೂಸ್

ಮಡಿಕೇರಿ: ಚಿತ್ರ ನಟಿ ರಶ್ಮಿಕಾ ಮಂದಣ್ಣ ಹುಟ್ಟುಹಬ್ಬದ ಅಂಗವಾಗಿ ಹಾಗೂ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬಳಿಕ ಮೊದಲ ಬಾರಿಗೆ ತವರಿಗೆ ಆಗಮಿ ಸಿದ ಹಿನ್ನೆಲೆಯಲ್ಲಿ ಭರ್ಜರಿ ಡಿನ್ನರ್ ಪಾರ್ಟಿ ನಡೆದಿದೆ. ಫೆ.26 ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿದಾಂಪತ್ಯ ಜೀವನಕ್ಕೆ ಕಾಲಿಟ್ಟಿತು.

ಹೈದರಾಬಾದ್ ನಲ್ಲಿ ಅದ್ದೂರಿ ಆರತಕ್ಷತೆಯೂ ನಡೆಯಿತು.ಮದುವೆ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದು, ಅವರಿಗೆ ತಂದೆಯಿಂದ ಅತ್ಯಮೂಲ್ಯ ಉಡುಗೊರೆಯೂ ಲಭಿಸಿದೆ. ಕೊಡಗಿನಲ್ಲಿ ಒಂದು ಅದ್ದೂರಿ ಬಂಗಲೆಯನ್ನು ರಶ್ಮಿಕಾಗೆ ಉಡುಗೊರೆಯಾಗಿ ಅವರ ತಂದೆ ಮದನ್ ಮಂದಣ್ಣ ನೀಡಿದ್ದಾರೆ. ವಿಜಯ್-ರಶ್ಮಿಕಾ ಮದುವೆಯಾದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ವಿರಾಜಪೇಟೆಯ ಸೆರೆನಿಟಿ ಹಾಲ್‌ನಲ್ಲಿ ಡಿನ್ನರ್ ಪಾರ್ಟಿ ನಡೆದಿದೆ.

ವಿರಾಜಪೇಟೆಯ ಗಣ್ಯರು, ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರಿಗಾಗಿ ಔತಣ ಕೂಟ ನಡೆದಿದೆ. ಮದುವೆ ಬಳಿಕ ಕೊಡಗಿನಲ್ಲೂ ಸಾಂಪ್ರದಾಯಿಕ ವಾಗಿ ಆರತಕ್ಷತೆ ಇಟ್ಟುಕೊಳ್ಳುವುದಾಗಿ ತಿಳಿಸಲಾಗಿತ್ತು. ಇದೀಗ ಹುಟ್ಟುಹಬ್ಬ ಹಾಗೂ ಆರತಕ್ಷತೆ ಈ ಎರಡೂ ಸಂಭ್ರಮ ಒಂದೇ ಕಾರ್ಯಕ್ರಮದಲ್ಲೇ ಸದ್ದಿಲ್ಲದೆ ನೆರವೇರಿದೆ ಎನ್ನಲಾಗಿದೆ. ರಶ್ಮಿಕಾ ಕೊಡವ ಶೈಲಿಯ ಸೀರೆಯಲ್ಲಿ ಕಂಗೊಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕೃಷ್ಣಪ್ಪ, ಪ್ರಿಯಾಕೃಷ್ಣ ಮೇಲೆ FIR

‘ಸಬಲೀಕರಣಕ್ಕೆ ಶಿಕ್ಷಣವೊಂದೆ ಮಾರ್ಗ’ಪ್ರಸನ್ನಕುಮಾರ್ ಕೆರಗೋಡು ಅಭಿಮತ

ನಗರಸಭೆ ಒಳಚರಂಡಿಯ ಕೊಳಚೆ ನೀರು ಕೆರೆಗೆ ಸೇರಿ ಸಾವಿರಾರು ಮೀನುಗಳು ಮೃತ

Leave a Comment