NEWS

ಪಂಜಾಬ್‌ಗೆ 6 ವಿಕೆಟ್‌ಗಳ ಗೆಲುವು

ಮುಲ್ಲನಪುರ: ಇಂಡಿಯನ್‌ ಪ್ರಿಮಿಯರ್‌ ಲೀಗ್ (ಐಪಿಎಲ್) ಟೂರ್ನಿಯ 17ನೇ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿತು.

ಮುಲ್ಲನಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್‌ಆರ್ ಎಚ್ ತಂಡವು ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ(74 ರನ್), ಟ್ರಾವಿಸ್ ಹೆಡ್ (38 ರನ್), ಕ್ಲಾಸೆನ್ (39 ರನ್) ಅವರ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿತ್ತು. ಪಂಜಾಬ್ ಪರ ಅರ್ಷ ದೀಪ್ ಸಿಂಗ್, ಶಶಾಂಕ್ ಸಿಂಗ್ ತಲಾ 2 ವಿಕೆಟ್ ಕಬಳಿಸಿದರು. 220 ರನ್ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಪ್ರಿಯಾಂಶ್ ಆರ್ಯ (57 ರನ್) ಹಾಗೂ ಪ್ರಭಸಿಮ್ರನ್ ಸಿಂಗ್ (51 ರನ್) ಉತ್ತಮ ಆರಂಭಒದಗಿಸಿದರು. ನಾಯಕನ ಆಟವಾಡಿದ ಶ್ರೇಯಸ್ ಅಯ್ಯರ್, ಯುವ ಸ್ಪಿನ್ನರ್ ಶಿವಂಗ್ ಕುಮಾರ್ 3 ವಿಕೆಟ್ ಪಡೆದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ದಾಂಪತ್ಯ ಜೀವನಕ್ಕೆ ನಟಿ ರಶ್ಮಿಕಾ ಮಂದಣ್ಣ

ಕೃಷಿ ಭೂಮಿಯಲ್ಲಿ ಅಕ್ರಮವಾಗಿ ನಾಯಿ-ಕುದುರೆ ಸಾಕಣೆ

ಜಿಲ್ಲೆಯಲ್ಲಿ ತಾಯಿ ಮರಣ ತಡೆಗಟ್ಟಲು ಮತ್ತು ಶೂನ್ಯಕ್ಕೆ ತರುವಂತೆ ಅಗತ್ಯ ಕ್ರಮ ವಹಿಸಿ – ಡಾ. ಕುಮಾರ

Leave a Comment