NEWS

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ.7.5 ಶುಲ್ಕ ಹೆಚ್ಚಳಕ್ಕೆ ತೀರ್ಮಾನ

ಪಾಲನೆ‌ ನ್ಯೂಸ್

ಬೆಂಗಳೂರು: ಕರ್ನಾಟಕದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ಇಂಜಿನಿಯರಿಂಗ್ ಕೋರ್ಸ್‌ಗಳ ಶುಲ್ಕವನ್ನು ಶೇಕಡಾ 7.5 ರಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿದೆ.


ಸತತ ಎರಡನೇ ವರ್ಷವೂ ಈ ಶುಲ್ಕ ಏರಿಕೆ ಮುಂದುವರಿದಿರುವುದು ತಾಂತ್ರಿಕ ಶಿಕ್ಷಣದ ಕನಸು ಕಾಣುತ್ತಿರುವ ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ಕುಟುಂಬಗಳಿಗೆ ಮತ್ತಷ್ಟು ಆರ್ಥಿಕ ಹೊಡೆತ ನೀಡಿದೆ. ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ (ಸಿಇಟಿ ಮೂಲಕ) ಸೀಟು ಪಡೆಯುವ ವಿದ್ಯಾರ್ಥಿಗಳು ಇನ್ನು ಮುಂದೆ ಹೆಚ್ಚಿನ ಮೊತ್ತ ಪಾವತಿಸ ಬೇಕಾಗುತ್ತದೆ. ಒಂದೇ ವರ್ಷದಲ್ಲಿ ಸುಮಾರು 6,000 ರೂ.ಗಳಿಂದ 7,000 ರೂ.ಗಳವರೆಗೆ ಹೆಚ್ಚಳವಾಗಿದೆ. ಕಳೆದ ವರ್ಷವಷ್ಟೆ ಸರ್ಕಾರ ಶುಲ್ಕ ಹೆಚ್ಚಿಸಿತ್ತು. ಅದರ ಪ್ರತಿಭಟನೆ ಮತ್ತು ಸರ್ಕಾರಕ್ಕೆ ಮನವಿ ವಿದ್ಯಾರ್ಥಿ ಸಂಘಗಳು ಮತ್ತು ಪೋಷಕರ ಸಂಘಟನೆಗಳು ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡಿವೆ. ಬೆಂಗಳೂರಿನಲ್ಲಿ ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳು ಸಿಇಟಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಯಿದೆ. ಕೂಡಲೇ ಈ ಪ್ರಸ್ತಾವನೆಯನ್ನು ಮರು ಪರಿಶೀಲಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಲ್ಕ ಹೆಚ್ಚಳವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮೇ 01 ರಂದು 2570ನೇ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮ

ನಿಖಿಲ್‌ಗೆ ರಾಜಕೀಯ ಯಶಸ್ಸು ಸಿಗಲಿ: ಬಿ.ಆರ್.ರಾಮಚಂದ್ರ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್

Leave a Comment