NEWS

ಆಸ್ಪತ್ರೆಗಳಲ್ಲಿ ಔಷಧ ಲಭ್ಯತೆ ಬಗ್ಗೆ ವ್ಯಾಪಕ ದೂರುಗಳು

ಪಾಲನೆ ನ್ಯೂಸ್

ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ, ಸ್ವಚ್ಛತೆ ಕಾಪಾಡದಿರುವುದು ಹಾಗೂ ಐಸಿಯುಗಳ ಅಸಮರ್ಪಕ ನಿರ್ವಹಣೆ ಕುರಿತು ನಿರಂತರ ದೂರುಗಳು ಬರುತ್ತಿವೆ. ಇದನ್ನು ಸಹಿಸಲಾಗುವುದಿಲ್ಲ. ದೂರು ಮುಂದುವರಿದರೆ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್ ಎಚ್ಚರಿಸಿದ್ದಾರೆ.


ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖಾ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಲೋಕಾಯುಕ್ತರು ಮಾಡಿರುವ ಆಸ್ಪತ್ರೆಗಳ ಅವಲೋಕನದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿ ಕಾರ್ಯನಿರ್ವಹಿಸುವ ಆಸ್ಪತ್ರೆಗಳಲ್ಲಿ ಔಷಧ ಲಭ್ಯತೆ ಬಗ್ಗೆ ವ್ಯಾಪಕ ದೂರುಗಳು ಬಂದಿವೆ. ಔಷಧ ಖರೀದಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಲು ಆಸ್ಪತ್ರೆಗಳ ಮುಖ್ಯಸ್ಥರಿಗೆ ಸರ್ಕಾರ ಜವಾಬ್ದಾರಿ ವಹಿಸಿರುವುದೇಕೆ? ಎಂದು ತರಾಟೆಗೆ ತೆಗೆದುಕೊಂಡ ಸಚಿವರು, ಔಷಧ ದಾಸ್ತಾನು ಪೂರ್ಣ ಖಾಲಿಯಾಗುವವರೆಗೆ ಏಕೆ ಕಾಯುತ್ತೀರಿ? ಹಳೆ ದಾಸ್ತಾನು ಖಾಲಿಯಾಗುವಷ್ಟರಲ್ಲಿ ಹೊಸ ದಾಸ್ತಾನು ಬಂದಿರುವಂತೆ ಕ್ರಮ ವಹಿಸಬೇಕು. ಎಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು ಕಾಲೇಜು ಮುಖ್ಯಸ್ಥರು ಕನಿಷ್ಠ ಮೂರು ತಿಂಗಳ ಮುಂಚಿತವಾಗಿ ಖರೀದಿ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು ಎಂದು ಸಚಿವರು ಸೂಚಿಸಿದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಸಾವಯವ ಸುಸ್ಥಿರ ಕೃಷಿ ಜನಜಾಗೃತಿ ಅಭಿಯಾನ ಮಾರ್ಚ್‌ 3

52 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಹೊರಕ್ಕೆ: ಲಕ್ಷ್ಮೀ ಹೆಬ್ಬಾಳ್ಕರ್

ಕತಾರ್‌ನಿಂದ ಭಾರತಕ್ಕೆ ಇಂಧನ

Leave a Comment