NEWS

ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪು ಇಲ್ಲ: ಡಿಕೆಶಿ ಸ್ಪಷ್ಟನೆ

ಪಾಲನೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ನಮ್ಮಲ್ಲಿ ಗುಂಪು ಎಂಬುದಿಲ್ಲ. ಎಲ್ಲರೂ ನಮ್ಮ ಶಾಸಕರೇ. ಮಾಧ್ಯಮಗಳು ನಮ್ಮನ್ನು ಇಬ್ಬಾಗ ಮಾಡುತ್ತಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಮತ್ತು ಸಿದ್ದರಾಮಯ್ಯ ಅವರ ಗುಂಪು ಎಂಬುದು ಎಲ್ಲಿದೆ? ನೀವೇ ಗುಂಪು ಸೃಷ್ಟಿ ಮಾಡುತ್ತಿದ್ದೀರಿ. ದೆಹಲಿಗೆ ಹೋದ ಶಾಸಕರು ಸಿದ್ದರಾಮಯ್ಯ ಅವರ ಗುಂಪು ಹೋಗಿದೆ ಎಂದು ಹೇಳಿದ್ದೀರಿ. ಅವರೇನು ಸಿದ್ದರಾಮಯ್ಯ ಗುಂಪು ಎಂದು ಬೋರ್ಡ್ ಹಾಕಿಕೊಂಡಿದ್ದಾರೆಯೇ ಅಥವಾ ನನ್ನ ಗುಂಪು ಎಂದು ನಾನು ಬೋರ್ಡ್ ಹಾಕಿಕೊಂಡಿದ್ದೇರೆಯೇ? ಎಲ್ಲ 139 ಶಾಸಕರು ನನ್ನ ಮತ್ತು ಸಿದ್ದರಾಮಯ್ಯ ಅವರ ಶಾಸಕರೇ. ಯಾವ ಗುಂಪೂ ಇಲ್ಲ, ಬೋರ್ಡೂ ಇಲ್ಲ. ನಿಮಗೆ ಹೇಗೆ ಬೇಕೋ ಹಾಗೆ ಬರೆಯುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಆರ್. ವೈಶಾಲಿ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಮಹಿಳಾ ವಿಭಾಗದಲ್ಲಿ ಚಾಂಪಿಯನ್

ಅಪೌಷ್ಠಿಕ ಮಕ್ಕಳನ್ನು ಗುರುತಿಸಿ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲು ಆಶಾ ಮತ್ತು ಅಂಗನವಾಡಿ ಕಾರ್ಯಕರತೆಯರಿಗೆ ಕರೆ: ಜಿ.ಪಂ. ಸಿಇಓ

ಭಗೀರಥರ ಚಿಂತನೆ, ಸಾಧನೆಯನ್ನು ಮಕ್ಕಳಗೆ ತಿಳಿಸುವ ಕೆಲಸವಾಗಬೇಕು

Leave a Comment