NEWS

ಏಪ್ರಿಲ್ 23 ಮತ್ತು 24 ರಂದು ಸಿ.ಇ.ಟಿ. ಪ್ರವೇಶ ಪರೀಕ್ಷೆ

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು : ಬಿ. ಸಿ. ಶಿವಾನಂದಮೂರ್ತಿ

ಪಾಲನೆ ನ್ಯೂಸ್

    ಮಂಡ್ಯ : 2025-26ನೇ ಸಾಲಿನ ಸಿ. ಇ. ಟಿ. ಪ್ರವೇಶ ಪರೀಕ್ಷೆಯು ಏಪ್ರಿಲ್ 23 ಮತ್ತು 24 ರಂದು ನಡೆಯಲಿದ್ದು ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಮಾಡಬೇಕು ಹಾಗೂ ಯಾವುದೇ ಲೋಪದೋಷವಾಗದಂತೆ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಬಿ.ಸಿ ಶಿವಾನಂದಮೂರ್ತಿ ರವರು ತಿಳಿಸಿದರು.

    ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನಲ್ಲಿ ಏಪ್ರಿಲ್ 23 ಮತ್ತು 24 ರಂದು ನಡೆಯುವ ಸಿ ಇ. ಟಿ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಿ. ಇ. ಟಿ. ಪ್ರವೇಶ ಪರೀಕ್ಷೆಯು ಜಿಲ್ಲೆಯಲ್ಲಿ 02 ತಾಲ್ಲೂಕು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 03 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಮಂಡ್ಯ ತಾಲ್ಲೂಕಿನಲ್ಲಿ 09 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ ಸಿ. ಇ. ಟಿ. ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

    ಕೆ.ಆ‌ರ್.ಪೇಟೆ ತಾಲ್ಲೂಕಿನಲ್ಲಿ 03 ಕೇಂದ್ರದಲ್ಲಿ ಒಟ್ಟು 1599 ವಿದ್ಯಾರ್ಥಿಗಳು ಹಾಗೂ ಮಂಡ್ಯ ಜಿಲ್ಲೆಯಲ್ಲಿ 09 ಕೆಂದ್ರದಲ್ಲಿ ಒಟ್ಟು 4660 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಜಿಲ್ಲಾದ್ಯಂತ 12 ಕೇಂದ್ರಗಳಿಲ್ಲಿ ಒಟ್ಟು 6259 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

    ಸಿ.ಇ.ಟಿ ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ವೆಬ್ ಕಾಸ್ಟಿಂಗ್ ಮೇಲುಸ್ತುವಾರಿಯನ್ನು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯವರು ನೋಡಿಕೊಳ್ಳಬೇಕು. ಪರೀಕ್ಷೆಯು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಸುತ್ತಳತೆಯಲ್ಲಿ ಐ.ಪಿ.ಸಿ ಸೆಕ್ಷನ್ 144ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

    ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಎ/ಬಿ ದರ್ಜೆಗಿಂತ ಕಡಿಮೆ ಇಲ್ಲದ (ತಹಶೀಲ್ದಾರರು, ಬಿ.ಇ.ಒಗಳು ಹಾಗೂ ಪ್ರಾಂಶುಪಾಲರುಗಳನ್ನೊಳಗೊಂಡ ತ್ರಿ-ಸದಸ್ಯ ಸಮಿತಿ) ಅಧಿಕಾರಿಗಳನ್ನೊಳಗೊಂಡಂತೆ 04 ತಂಡಗಳ ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿಗಳ ವಿಶೇಷ ತಂಡವನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶಿಸಿರುತ್ತಾರೆ ಎಂದು ತಿಳಿಸಿದರು.

    ಕೆ.ಆರ್. ಪೇಟೆ ತಾಲ್ಲೂಕಿನ ಬೆಳಗ್ಗಿನ ಅವಧಿಯ ಪ್ರಶ್ನೆಪತ್ರಿಕೆಯೊಂದಿಗೆ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ತ್ರಿಸದಸ್ಯ ಸಮಿತಿಯವರೊಂದಿಗೆ ಕಳುಹಿಸಿ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ಕೆ.ಆರ್.ಪೇಟೆ ತಾಲ್ಲೂಕು ಖಜಾನೆಯಲ್ಲಿ ಇರುಸುವಂತೆ ತಾಲ್ಲೂಕು ಖಜಾನಾಧಿಕಾರಿಯವರಿಗೆ ತಿಳಿಸಬೇಕು ಮತ್ತು ಬೆಳಿಗ್ಗಿನ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ನಂತರ ಆಯಾ ದಿನದಂದ ಜಿಲ್ಲಾ ಖಜಾನೆಗೆ ಠೇವಣಿಸಬೇಕು. ಮಧ್ಯಾಹ್ನದ ಪರೀಕ್ಷೆ ಮುಗಿದ ನಂತರ ಆಯಾ ದಿನದಂದೆ ಎರಡು ಅವಧಿಯ ಉತ್ತರ ಪತ್ರಿಕೆಗಳನ್ನು ಮಂಡ್ಯ ಜಿಲ್ಲಾ ಖಜಾನೆಗೆ ಠೇವಣಿಸುವಂತೆ ತಿಳಿಸಿದರು.

    ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಹಾಗೂ ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಮತ್ತು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಖಜಾನೆಗೆ ಕೇಂದ್ರಗಳಿಗೆ ಸುರಕ್ಷಿತವಾಗಿ ತಲುಪಿಸುವವರೆಗೂ ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿಗಳ ತಂಡಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಸೂಚಿಸಿದರು.

    ವಿದ್ಯಾರ್ಥಿಗಳಿಗೆ frisking ಮಾಡಲು ಇಬ್ಬರು ಪಿ.ಸಿ ಗಳು(ಮಹಿಳಾ ಸಿಬ್ಬಂದಿಯನ್ನೊಳಗೊಂಡಂತೆ) ಹೊಮ್‌ ಗಾರ್ಡ್ಳನ್ನು ನಿಯೋಜಿಸಬೇಕು ಎಂದರು. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ರಿಸ್ಟ್ ವಾಚ್, ಮೊಬೈಲ್ ಹಾಗೂ ಇತ್ಯಾದಿ ಇಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರವನ್ನು ಹಾಕಬೇಕು ಎಂದು ಸೂಚಿಸಿದರು.

    ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ ಬೋಧಿಸುವ ಉಪನ್ಯಾಸಕರುಗಳನ್ನು ನೇಮಕಮಾಡಿಕೊಳ್ಳುವಂತಿಲ್ಲ. ಹಾಗೂ ಸಿ.ಇ.ಟಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪೋಷಕರು ಸಿ.ಇ.ಟಿ ಪರೀಕ್ಷಾ ಕರ್ತವ್ಯದಲ್ಲಿ ಪಾಲ್ಗೊಳ್ಳಬಾರದಂತೆ ಕ್ರಮ ವಹಿಸಬೇಕು ಎಂದರು.

    ಹಾಗೂ ಹೆಚ್ಚುವರಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳುಬೇಕು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ವೈದ್ಯಧಿಕಾರಿಗಳನ್ನು ನೇಮಿಸಬೇಕು ಹಾಗೂ ಪ್ರಥಮ ಚಿಕಿತ್ಸೆಗೆ ಬೇಕಾಗುವ ಔಷದಿಗಳನ್ನು ಒದಗಿಸಬೇಕು ಹಾಗೂ ವೆಬ್ ಕಾಸ್ಟಿಂಗ್ ಮಾಡುವ ಸಂಬಂಧ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾಡಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಪರ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್, ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ರವಿಶಂಕರ್,ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಸಿ. ಚಲುವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವರವರು ಸೇರಿದಂತೆ ಇನ್ನಿತರ ಅಧಿಕಾರಿಕಾರಿಗಳು ಉಪಸ್ಥಿತರಿದ್ದರು.

    ✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಹೈನುಗಾರಿಕೆ; ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಆಶಾಕಿರಣ : ಜಿ.ಪಂ.ಸಿಇಒ ಕೆ.ಆರ್.ನಂದಿನಿ.

    ಕೆರೆ ಜಾಗ ನುಂಗಿದ ಭೂಪರು!

    ಪೆಟ್ರೋಲ್‌ ಬೆಲೆಯಲ್ಲಿ ಏರಿಕೆ

    Leave a Comment