NEWS

ಶಂಕರಾಚಾರ್ಯರು ಜಗತ್ತಿಗೆ ಮಾನವಿಯತೆ ಸಂದೇಶ ಸಾರಿದ್ದಾರೆ : ಗಂಗಾಧರ ಸ್ವಾಮಿ

ಪಾಲನೆ ನ್ಯೂಸ್

ಮಂಡ್ಯ : ಶಂಕರಾಚಾರ್ಯರು ಜಗತ್ತಿಗೆ ಮಾನವೀಯ ಸಂದೇಶ ಸಾರುವ ಮೂಲಕ ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ ಎಂದು ಅಪರ ಪೊಲೀಸ್ ಅಧೀಕ್ಷಕ ಗಂಗಾಧರ ಸ್ವಾಮಿ ಅವರು ಹೇಳಿದರು.

ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅದ್ವೈತ ಸಿದ್ಧಾಂತವನ್ನು ಶಂಕರಾಚಾರ್ಯರು ಪ್ರತಿಪಾದಿಸಿದರು, ಹಿಂದೂ ಧರ್ಮದ ಮೌಲ್ಯಗಳನ್ನು ಜಗತ್ತಿಗೆ ಕಾಣುವಂತೆ ಎತ್ತಿ ಹಿಡಿದ ಮಹನೀಯರು ಎಂದು ಹೇಳಿದರು.

ಶಂಕರಾಚಾರ್ಯರ ತತ್ವ ಆದರ್ಶಗಳನ್ನು ನಾವು ಜೀವನದಲ್ಲಿ ರೂಢಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸಾಮರಸ್ಯ ಕಾಪಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ ನಂದೀಶ್, ಮುಖಂಡರುಗಳಾದ ಶಂಕರನಾರಾಯಣ ಶಾಸ್ತ್ರಿ, ಬಿ ಜಿ ಉಮಾ, ಗೋಪಾಲಕೃಷ್ಣ ಶೆಣೈ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಾರ್ಚ್ 11 ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ -2026

ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವುದು

ಕಬ್ಬು ಬೆಳೆಗಾರರಿಗೆ ಅನುದಾನ ತಕ್ಷಣ ಬಿಡುಗಡೆಗೆ ಜಿಲ್ಲಾಧಿಕಾರಿ ಸೂಚನೆ

Leave a Comment