NEWS

23 ರಿಂದ ಮೇ 22 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗದ ವಿರುದ್ಧದ ಲಸಿಕಾ ಕಾರ್ಯಕ್ರಮ

ಪಾಲನೆ ನ್ಯೂಸ್

ಮಂಡ್ಯ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮಂಡ್ಯ ಜಿಲ್ಲೆ ಮತ್ತು ಮಂಡ್ಯ ಜಿಲ್ಲಾ ಹಾಲು ಒಕ್ಕೂಟ.ಗೆಜ್ಜಲಗೆರೆ ಇವರ ಸಹಯೋಗದೊಂದಿಗೆ 2026-27 ನೇ ಸಾಲಿನ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಪಶುಪಾಲನಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿನ ಎಲ್ಲಾ ಜಾನುವಾರುಗಳಿಗೆ 9 ನೇ ಸುತ್ತಿನ ಕಾಲುಬಾಯಿ ರೋಗದ ವಿರುದ್ಧದ ಲಸಿಕಾ ಕಾರ್ಯಕ್ರಮವನ್ನು ದಿನಾಂಕ ಏಪ್ರಿಲ್ 23 ರಿಂದ ಮೇ 22 ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಇದರ ಪ್ರಯುಕ್ತ ಮಂಡ್ಯ ಜಿಲ್ಲೆಯಲ್ಲಿನ ಪಶುಪಾಲನಾ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಜಿಲ್ಲೆಯಲ್ಲಿನ ಎಲ್ಲಾ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ದನ, ಎಮ್ಮೆ, ಮತ್ತು 3 ತಿಂಗಳ ಮೇಲ್ಪಟ್ಟ ಎಲ್ಲಾ ಕರುಗಳಿಗೆ ಏಪ್ರಿಲ್ 23 ರಿಂದ ಮೇ 22 ರವರಿಗೆ ಉಚಿತವಾಗಿ ಕಾಲುಬಾಯಿ ರೋಗದ ವಿರುದ್ಧದ ಲಸಿಕೆಯನ್ನು ನೀಡುತ್ತಿದ್ದು ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ಪಶುಪಾಲನಾ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಭೇಟಿ ನೀಡಿದಾಗ ತಮ್ಮಲಿರುವ ಲಸಿಕೆಯನ್ನು ಹಾಕಿಸಿ ಕಾಲುಬಾಯಿ ರೋಗ ಹರಡುವುದನ್ನು ತಪ್ಪಿಸಿ ಕರ್ನಾಟಕ ರಾಜ್ಯವನ್ನು ಜಾನುವಾರುಗಳಿಗೆ ಕಾಲುಬಾಯಿ ರೋಗ ಮುಕ್ತ ರಾಜ್ಯವನ್ನಾಗಿ ಮಾಡಲು ಮತ್ತು ಜಾನುವಾರುಗಳಿಗೆ ಕಾಲುಬಾಯಿ ರೋಗದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ರಸ್ತೆಗಳ ಮೂಲೆಗಳಲ್ಲಿ ಕಸ ಹಾಕುವವರಿಗೆ ದಂಡ

ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭಾರತ ಕಿರುಚಿತ್ರ ಸ್ಪರ್ಧೆ-2026

Leave a Comment