NEWS

ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶ

ಪಾಲನೆ ನ್ಯೂಸ್

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕೋರ್ಟ್ ಆದೇಶದಂತೆ ಅಂಕ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದಲ್ಲಿರುವ ಬಂಗಾರಧಾಮದಲ್ಲಿ ಬುಧ ವಾರ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆಯ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದರು.

ಈ ಬಾರಿ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ ಎಂದರು. ಎಸ್‌ಎಸ್ ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಯಾದ ಹಿಂದಿ ಕಡ್ಡಾಯವಲ್ಲ ಎಂಬ ತೀರ್ಮಾನವನ್ನು ಸರ್ಕಾರ ಕೈಗೊಂಡಿತ್ತು. ಸರ್ಕಾರ ಹಿಂದಿ ವಿರೋಧಿಯಲ್ಲ. ಬದಲಾಗಿ ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದೆ. ಕನ್ನಡದ ಪರವಾಗಿ ನಿಲ್ಲಲು ಸರ್ಕಾರ ಈ ತೀರ್ಮಾನ ಕೈಗೊಂಡಿತ್ತು. ಆದರೆ, ಹೈಕೋರ್ಟ್ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ ಎಂದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನೇರಲಕೆರೆಯಲ್ಲಿ ಸರ್ವಧರ್ಮ ಮಾನವ ಸಮ್ಮೇಳನ-2026  

ಮಲೆಮಹದೇಶ್ವರ ಬೆಟ್ಟದಲ್ಲಿ ಬಸ್‌ಗಳ ಮುಖಾಮುಖಿ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಕನ್ನಿಕಾ ಶಿಲ್ಪ ನವೋದಯ ಎಜುಕೇಷನ್ ಟ್ರಸ್ಟ್‌ನ 56 ವಿದ್ಯಾರ್ಥಿಗಳು ಉತ್ತೀರ್ಣ : ಕನ್ನಿಕಾ

Leave a Comment