NEWS

ಪ್ರತಿ 10 ಗ್ರಾಂ ಚಿನ್ನದ ಬೆಲೆ ₹900 ಇಳಿಕೆ

ಪಾಲನೆ ನ್ಯೂಸ್

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ಮಂದಗತಿಯ ಟ್ರೆಂಡ್‌ನಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಇಳಿಕೆ ಕಂಡಿವೆ. ಪ್ರತಿ 10 ಗ್ರಾಂ ಚಿನ್ನದ ಬೆಲೆ ₹900 ಕುಸಿದು ₹1,56,100 ತಲುಪಿದ್ದರೆ, 1kg ಬೆಳ್ಳಿ ಬೆಲೆಯಲ್ಲಿ ಕುಸಿದು₹5,300 ರಷ್ಟು ಪತನ ಕಂಡು ₹2,50,000 ಸ್ಥಿರವಾಗಿದೆ.

ಆಲ್ ಇಂಡಿಯಾ ಸರಾಫ ಸಂಘ ನೀಡಿರುವ ಮಾಹಿತಿ ಪ್ರಕಾರ, ಬುಧವಾರದ ವಹಿವಾಟಿನಲ್ಲಿ ಚಿನ್ನ ₹1,57,000ರಲ್ಲಿ ಅಂತ್ಯವಾಗಿತ್ತು. ಆದರೆ ಗುರುವಾರ ಶೇ. 99.9ರಷ್ಟು ಶುದ್ಧತೆಯ ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬುಧವಾರದ ಮುಕ್ತಾಯದ ಬೆಲೆ ₹2,55,300ರಿಂದ ಕೆಳಕ್ಕೆ ಇಳಿದಿದೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳು ಈ ಬೆಲೆ ಇಳಿಕೆಗೆ ಪ್ರಮುಖ ಕಾರಣಗಳೆಂದು ವಿಶ್ಲೇಷಿಸಲಾಗುತ್ತಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಾ.18ರಿಂದ ಏ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಶಾಲೆಯಿಂದ ಹೊರಗುಳಿದ ಹದಿಹರೆಯದ ಮಕ್ಕಳ ಮೇಲೆ ನಿಗಾ ವಹಿಸಿ: ಸಂಗಮೇಶ ಬಬಲೇಶ್ವರ

ಬೇಸಿಗೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ತೊಂದರೆಯಾಗಬಾರದು

Leave a Comment