ಪಾಲನೆ ನ್ಯೂಸ್
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ 6.40ಕ್ಕೆ ಗೋಧೂಳಿ ಲಗ್ನ ಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ಯಲ್ಲಿ, ಡಿ.ಹರ್ಷೇಂದ್ರ ಕುಮಾರ್‌ನೇತೃತ್ವದಲ್ಲಿ ನಡೆಯಲಿದೆ.
ಈಗಾಗಲೇ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.

ವರನಿಗೆ ಪಂಚೆ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು ಎಂದು ಟ್ರಸ್ಟ್ ಕಾರ್ಯದರ್ಶಿ ಎ.ವಿ.ಶೆಟ್ಟಿ ತಿಳಿಸಿದ್ದಾರೆ. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚ ತಡೆಯುವ ಉದ್ದೇಶದಿಂದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಲ್ಲಿ 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸುತ್ತಿದ್ದು, ಕಳೆದ ವರ್ಷದ ವರೆಗೆ 13 ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ.
✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

