NEWS

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2

ಪಾಲನೆ ನ್ಯೂಸ್

ಬೆಂಗಳೂರು : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2 ಏ.30ರಿಂದ ಆರಂಭವಾಗಲಿದ್ದು, ಮೇ13ರವರೆಗೆ ರಾಜ್ಯಾದ್ಯಂತ ನಡೆಯಲಿವೆ. ಪರೀಕ್ಷೆಗೆ ಒಟ್ಟು 1,72,151 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಈ ಪೈಕಿ 92,554 ಹುಡುಗರು 79,597 ವಿದ್ಯಾರ್ಥಿನಿಯರು ಇದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ ಫಲಿತಾಂಶಸುಧಾರಣೆಗಾಗಿ ಪರೀಕ್ಷೆ ಬರೆಯುತ್ತಿರುವವರ ಸಂಖ್ಯೆ 49,512. ಉಳಿದಂತೆ 82,765 ಜನ ಪರೀಕ್ಷೆ 1ರಲ್ಲಿ ಅನುತ್ತೀರ್ಣರಾದವರು. 794 ಖಾಸಗಿ ಅಭ್ಯರ್ಥಿಗಳು, 29,099
ಪುನರಾವರ್ತಿತ ಅಭ್ಯರ್ಥಿಗಳು ನೋಂದಾಯಿಸಿದ್ದಾರೆ ಎಂದು ಮಂಡಳಿಯ ನಿರ್ದೇಶಕ (ಪರೀಕ್ಷೆ) ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.

ಪರೀಕ್ಷೆಗಳು ಬೆಳಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4.15ರವರೆಗೆ ಎರಡು ಅವಧಿ ಯಲ್ಲಿ ನಡೆಯಲಿವೆ. ಗುರುವಾರ ಮೊದಲ ದಿನ ಕನ್ನಡ, ಅರೇಬಿಕ್ ಭಾಷೆ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಆಪ್ತ ಸಂವಾದದಲ್ಲಿ ಸಂಜಯ್ ಗುಬ್ಬಿ: ಶಾಲೆಗೆ ಬಂದ ಚಿರತೆ ಮತ್ತು ಇತರ ಕಥೆಗಳು ಮಾತುಕತೆ

ಟ್ರಂಪ್‌ ಹೊಸ ಧಮಕಿ

ಅತ್ಯಾಚಾರ-ಹತ್ಯೆ ಮೂವರು ಅಪರಾಧಿಗಳಿಗೆ ಮರಣದಂಡನೆ

Leave a Comment