ಪಾಲನೆ ನ್ಯೂಸ್
ನವದೆಹಲಿ: ಪಶ್ಚಿಮ ಬಂಗಾಳದಲ್ಲಿನ 2ನೇ ಹಂತದ ಮತದಾನ ಅಂತ್ಯವಾಗುತ್ತಲೇ ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ಹೊರಬಿದಿದ್ದು, ಪಶ್ಚಿಮ ಬಂಗಾಳದಲ್ಲಿ ಹಾಲಿ ಸಿಎಂ ಮಮತಾ ಬ್ಯಾನರ್ಜಿಗೆ ಭಾರಿ ಹಿನ್ನಡೆಯಾಗಿದೆ. ಅಂತೆಯೇ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೌದು.. ಏಪ್ರಿಲ್ 9ರಂದು ಅಸ್ಸಾಂನ 126 ಕ್ಷೇತ್ರಗಳು, ಕೇರಳದ 140 ಕ್ಷೇತ್ರಗಳು ಮತ್ತು ಪುದುಚೇರಿಯ 30 ಕ್ಷೇತ್ರಗಳಿಗೆ ಏಕಕಾಲದಲ್ಲಿ ವಿಧಾನಸಭಾ ಚುನಾವಣೆ ನಡೆಯಿತು. ಏಪ್ರಿಲ್ 23ರಂದು ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಿಗೆ ಮತದಾನ ನಡೆಯಿತು.ಪಶ್ಚಿಮ ಬಂಗಾಳದಲ್ಲಿ 152 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಏಪ್ರಿಲ್ 23ರಂದು ನಡೆಯಿತು. ಎರಡನೇ ಮತ್ತು ಅಂತಿಮ ಹಂತದ ಮತದಾನ ಇಂದು ನಡೆಯಿತು. ಈ 5 ರಾಜ್ಯಗಳ ಚುನಾವಣಾ ಫಲಿತಾಂಶ ಮೇ 4ರಂದು ಹೊರಬೀಳಲಿದೆ.

ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಕೇರಳದಲ್ಲಿ ಎಲ್ ಡಿಎಫ್, ತಮಿಳುನಾಡಿನಲ್ಲಿ ಡಿಎಂಕೆ, ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
