NEWS

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ : ಡಿಕೆಶಿ ಪಾರು

ಪಾಲನೆ ನ್ಯೂಸ್

ರಾಯಚೂರು: ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯ ಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರ ನ್ನು ಕೂಡಲೇ ಅಲ್ಲಿಂದ ಹೊರತರಲಾಯಿತು.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಭಾಗವಹಿಸಿದ್ದರು. ನವ ಜೋಡಿಗಳಿಗೆ ಶುಭಕೋರಿದ ಬಳಿಕ ವೇದಿಕೆ ಬಳಿ ಶಿವಕುಮಾ‌ರ್ ತೆರಳುತ್ತಿದ್ದ ವೇಳೆ ವೇದಿಕೆಯ ಮೆಟ್ಟಿಲುಗಳ ಬಳಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಎಕ್ಸ್‌ನಲ್ಲಿ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮಾಡಿರುವ ಒಂದು ‘ಡ್ರಾಫ್ಟ್’ ಪೋಸ್ಟ್

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಜಾರಿ: ಡಾ. ಕುಮಾರ

ಕೃಷಿಗೆ ಬೀಜವೇ ಮೂಲಾಧಾರ – ದೇಸಿ ಬೀಜ ಸಂರಕ್ಷಣೆ ಹಾಗೂ ನೀರಿನ ಸದ್ಬಳಕೆಗೆ ರೈತರು ಒತ್ತು ನೀಡಬೇಕು : ಡಾ. ಕೆ. ಸಿ. ನಾರಾಯಣಸ್ವಾಮಿ

Leave a Comment