ಪಾಲನೆ ನ್ಯೂಸ್
ಮಂಡ್ಯ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ದೇಶನದಂತೆ, 2025–26ನೇ ಸಾಲಿನ ಹಂಗಾಮಿನಲ್ಲಿ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ತಕ್ಷಣವೇ ಪಾವತಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಸೂಚಿಸಿದರು.
- ರಾಜ್ಯ ಸರ್ಕಾರವು ಕಬ್ಬು ಸರಬರಾಜು ಮಾಡಿದ ರೈತರಿಗೆ ಪ್ರತಿ ಮೆಟ್ರಿಕ್ ಟನ್ಗೆ ರೂ.50/- ಹಾಗೂ ಸಕ್ಕರೆ ಕಾರ್ಖಾನೆಗಳಿಂದ ರೂ.50/- ಹೆಚ್ಚುವರಿ ಬೆಲೆ ನೀಡುವಂತೆ ಆದೇಶಿಸಿದ್ದು, ಸರ್ಕಾರದ ಪಾಲಿನ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
- ಸರ್ಕಾರದ ಆದೇಶದ ವಿರುದ್ಧ ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳು ಮಾನ್ಯ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿರುವ ಹಿನ್ನೆಲೆ, ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೆ ಕಾರ್ಖಾನೆಗಳ ಪಾಲಿನ ರೂ.50/- ಅನ್ನು ಕಾಯ್ದಿರಿಸಲು ಸೂಚಿಸಲಾಗಿದೆ.
- ಸರ್ಕಾರದ ಪಾಲಿನ ರೂ.50/- ಅನುದಾನವನ್ನು ಸಂಬಂಧಿತ ಜಿಲ್ಲಾಧಿಕಾರಿಗಳಿಂದ ಪಡೆದು, ಸಕ್ಕರೆ ಕಾರ್ಖಾನೆಗಳು ತಮ್ಮ ಮೂಲಕವೇ ರೈತರಿಗೆ ತಕ್ಷಣವೇ ಪಾವತಿಸುವಂತೆ ಮಾನ್ಯ ಆಯುಕ್ತರು, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕರು ದಿನಾಂಕ 04-05-2026ರಂದು ನಿರ್ದೇಶನ ನೀಡಿರುತ್ತಾರೆ.
- ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದ ಪಾಲಿನ ರೂ.50/- ಸಹಾಯಧನವನ್ನು ಯಾವುದೇ ವಿಳಂಬವಿಲ್ಲದೆ ಕಬ್ಬು ಸರಬರಾಜು ಮಾಡಿದ ರೈತರಿಗೆ ತಕ್ಷಣ ಪಾವತಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
- ಅಂತಿಮವಾಗಿ, ರೈತರ ಹಿತಾಸಕ್ತಿಯನ್ನು ಪ್ರಮುಖವಾಗಿ ಪರಿಗಣಿಸಿ, ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ತಕ್ಷಣವೇ ರೈತರಿಗೆ ಪಾವತಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಮತ್ತೊಮ್ಮೆ ಸೂಚಿಸಿದರು.

✅ ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
