ತಾಲ್ಲೂಕು ಮಟ್ಟದಲ್ಲಿ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ : ಡಾ. ಕುಮಾರ
ಪಾಲನೆ ನ್ಯೂಸ್
ಮಂಡ್ಯ : ಬಾಲಕಾರ್ಮಿಕ & ಕಿಶೋರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಪತ್ತೆಹಚ್ಚಿ ಶೈಕ್ಷಣಿಕವಾಗಿ ಶಿಕ್ಷಣವನ್ನು ಕಡ್ಡಾಯವಾಗಿ ನೀಡುವುದು ಮುಖ್ಯ ಹಾಗೂ ಜಿಲ್ಲಾ ಎಲ್ಲಾ ಶಾಲೆಗಳಗೆ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ನಿರಂತರ ಗೈರು ಹಾಜರಾತಿಯಾದ ಮಕ್ಕಳ ಪೋಷಕರನ್ನು ಭೇಟಿ ಮಾಡಿ ಪರಿಶೀಲಿಸಿ ಮಾಹಿತಿಯನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ( ನಿಷೇಧ ಮತ್ತು ನಿಯಂತ್ರಣ ಕಾಯ್ದೆ) 1986, ನಿಯಮಗಳು 2017( ಕೇಂದ್ರ/ರಾಜ್ಯ )ಗಳ ಕುರಿತು ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ 14 ವರ್ಷದೊಳಗಿನ ಮಕ್ಕಳು ಗ್ಯಾರೇಜ್, ಹೋಟೆಲ್, ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ ಮಾಲೀಕರ ಮೇಲೆ ಕಾನೂನು ಕ್ರಮ ವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಏಪ್ರಿಲ್ 2025 ರಿಂದ ಮಾರ್ಚ್ 2026 ರ ಅಂತಿಮವರಿಗೆ ಜಿಲ್ಲೆಯಲ್ಲಿ ಅಧಿಕಾರಿಗಳು 951 ತಪಾಸಣೆಗಳನ್ನು ಕೈಗೊಂಡಿದ್ದು 40 ಕಿಶೋರ ಕಾರ್ಮಿಕರನ್ನು ಪಟ್ಟೆಹಚ್ಚಲಾಗಿದ್ದು ದಾಖಲಿಸಲಾದ 14 ಪ್ರಕರಣಗಳು ಎಫ್.ಐ.ಆರ್. ಆಗಿರುತ್ತದೆ ಹಾಗೂ 26 ಪ್ರಕರಣಗಳು ಜೆ. ಎಂ. ಎಫ್. ಸಿ. ನ್ಯಾಯಾಲಯದಲ್ಲಿ ದಾಖಲಾಗಿವೆ ಎಂದು ತಿಳಿಸಿದರು.
ಬಾಲಕಾರ್ಮಿಕ & ಕಿಶೋರ ಕಾರ್ಮಿಕ ಕುರಿತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಮಾಡಬೇಕು ಹಾಗೂ ಕಿಶೋರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ, ಮಕ್ಕಳಿಗೆ ಕೌನ್ಸಿಲಿಂಗ್ ಮಾಡಿ ಉತ್ತಮ ಶಿಕ್ಷಣ ನೀಡುವುದರ ಜೊತೆ ಕೌಶಲ್ಯ ತರಬೇತಿಗಳನ್ನು ಸಹ ನೀಡಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಆನಂದ.ಎಂ ರವರು ಮಾತನಾಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿ 3 ತಿಂಗಳಿಗೊಮ್ಮೆ TASK FORCE ಸಮಿತಿ ಸಭೆಯನ್ನು ಮಾಡಬೇಕು ಹಾಗೂ ನಿರಂತರ ವಾಗಿ ಬಾಲಕಾರ್ಮಿಕ & ಕಿಶೋರ ಕಾರ್ಮಿಕ ಮತ್ತು ಬಾಲ್ಯ ವಿವಾಹ ಕುರಿತು ಅರಿವು ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಿಳಿಸಿದರು.
2025-26 ನೇ ಸಾಲಿನಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನ ಕುರಿತು ಜಿಲ್ಲಾವಾರು 09 ಬೀದಿ ನಾಟಕ, 7,000 ಕರಪತ್ರ, 22 ಗೋಡೆ ಬರಹ 06 ಗ್ರಾಮ ಪಂಚಾಯತ್ ಗಳಲ್ಲಿ ಅರಿವು ಕಾರ್ಯಕ್ರಮದ ಮೂಲಕ ಜನಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ತಿಮ್ಮಯ್ಯ, ಕಾರ್ಮಿಕ ಇಲಾಖೆ ಅಧಿಕಾರಿ ಡಾ.ಸವಿತಾ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ಪ್ರಭಾಕರ್, ರಾಜ್ಯ ಸಂಚಾಲಕರಾದ ಬಿನುವರ್ಗೀಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ್, ಹಿಂದುಳಿದ ವರ್ಗಗಳ ಇಲಾಖೆಯ ಉಪನಿರ್ದೇಶಕಿ ಮಂಜುಳಾ, ಜಿಲ್ಲಾ ಆರೋಗ್ಯ ಇಲಾಖೆಯ ಸರ್ವೇಕ್ಷಣ ಅಧಿಕಾರಿ ಡಾ. ಕುಮಾರ್, ನಗರಸಭೆಯ ಪರಿಸರ ವಿಭಾಗದ ಅಭಿಯಂತರರಾದ ರುದ್ರಗೌಡ, ಡಿ. ಡಿ. ಪಿ ಲೋಕೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಆಶಾ ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
